ಅಕ್ಟೋಬರ್ನಲ್ಲಿ ಮತ್ತೊಂದು ಕೊರೊನಾ ಲಸಿಕೆ ‘ಕೋವಾವ್ಯಾಕ್ಸ್’ ಬಿಡುಗಡೆ

ಬೆಂಗಳೂರು, ಆಗಸ್ಟ್ 07, 2021 (www.justkannada.in) ಕೊರೊನಾ ಲಸಿಕೆ ‘ಕೋವಾವ್ಯಾಕ್ಸ್’ ಅಕ್ಟೋಬರ್‌ನಲ್ಲಿ ಬಿಡುಗಡೆಗೊಳ್ಳಲಿದೆ.

ಹೌದು. ಸೀರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಮತ್ತೊಂದು ಕೊರೊನಾ ಲಸಿಕೆ ‘ಕೋವಾವ್ಯಾಕ್ಸ್’ ಅಕ್ಟೋಬರ್‌ನಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಸಂಸ್ಥೆ ಸಿಇಒ ಅದಾರ್ ಪೂನಾವಾಲಾ ತಿಳಿಸಿದ್ದಾರೆ.

ಕೋವೊವ್ಯಾಕ್ಸ್ ಅನ್ನು ಅಕ್ಟೋಬರ್ ನಲ್ಲಿ ಮತ್ತು 2022ರ ಮೊದಲ ತ್ರೈಮಾಸಿಕದಲ್ಲಿ ಮಕ್ಕಳಿಗಾಗಿ ಬಿಡುಗಡೆ ಮಾಡುವ ವಿಶ್ವಾಸವಿದೆ ಎಂದಿದ್ದಾರೆ.

ಈ ಸಂಬಂಧ ಪೂನಾವಾಲಾ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಸತ್ತಿನಲ್ಲಿ ಭೇಟಿ ಮಾಡಿ ಸುಮಾರು 30 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.