ಪ್ರಧಾನಿ ಮೋದಿ ಕಾಣಿಸಿಕೊಂಡಿರುವ ಹಾಡು ಗ್ರ್ಯಾಮಿ ಪ್ರಶಸ್ತಿಗೆ ನಾಮನಿರ್ದೇಶನ

ಬೆಂಗಳೂರು, ನವೆಂಬರ್ 11, 2023 (www.justkannada.in): ಸಿರಿಧಾನ್ಯಗಳ ಮಹತ್ವವನ್ನು ಸಾರುವ ವಿಶೇಷ ಹಾಡು ‘ಅಬಂಡನ್ಸ್ ಇನ್ ಮಿಲೆಟ್ಸ್’ ಈ ವರ್ಷದ ಗ್ರ್ಯಾಮಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ.

‘ಅಬಂಡನ್ಸ್ ಇನ್ ಮಿಲೆಟ್ಸ್’ ಹಾಡು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒಳಗೊಂಡಿದೆ. ಇದಕ್ಕೆ ಭಾರತೀಯ ಮೂಲದ ಅಮೆರಿಕನ್ ಗಾಯಕಿ ಫಲ್ಗುಣಿ ಶಾ ಸಂಗೀತ ನೀಡಿದ್ದಾರೆ. ಇವರ ಪತಿ ಗೌರವ್ ಶಾ ಈ ಹಾಡು ಹಾಡಿದ್ದಾರೆ.

ಅತ್ಯುತ್ತಮ ಜಾಗತಿಕ ಸಂಗೀತ ಪ್ರದರ್ಶನ ವಿಭಾಗದ ಅಡಿಯಲ್ಲಿ, ಫಾಲು ಮತ್ತು ಗೌರವ್ ಶಾ (ಪ್ರಧಾನಿ ನರೇಂದ್ರ ಮೋದಿ ಅವರನ್ನು ಒಳಗೊಂಡಿರುವ) ಅವರ ಅಬಂಡನ್ಸ್ ಇನ್ ಮಿಲೆಟ್ಸ್ ಹಾಡು ಗ್ರ್ಯಾಮಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ.

ಈ ವಿಷಯವನ್ನು ಗೌರವ್ ಶಾ ಹಂಚಿಕೊಂಡಿದ್ದಾರೆ. ಇಡೀ ಜಗತ್ತು, 2023ರ ವಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷವನ್ನಾಗಿ ಆಚರಿಸುತ್ತಿದೆ. ಸಿರಿಧಾನ್ಯಗಳನ್ನು ಉತ್ತೇಜಿಸುವುದಕ್ಕಾಗಿ ಸೃಷ್ಟಿಸಲಾದ ಈ ಹಾಡಿನಲ್ಲಿ ಮೋದಿ ಕಾಣಿಸಿಕೊಂಡಿದ್ದಾರೆ.