ರೈತರಿಗೆ ಉಚಿತ ಸೌರ ವಿದ್ಯುತ್ ಪೂರೈಸಲು ಕುಸುಮ್ ಯೋಜನೆ ಘೋಷಿಸಿದ ರಾಜ್ಯ ಸರಕಾರ

ಬೆಂಗಳೂರು, ಅಕ್ಟೋಬರ್ 23, 2022 (www.justkannada.in): ರೈತರಿಗೆ ಉಚಿತ ಸೌರ ವಿದ್ಯುತ್ ಪೂರೈಸಲು ಕುಸುಮ್ ಯೋಜನೆಯನ್ನು ರಾಜ್ಯ ಸರಕಾರ ಜಾರಿಗೊಳಿಸಲಿದೆ.

ಈ ಕುರಿತು ಇಂಧನ ಸಚಿವ ವಿ. ಸುನಿಲ್ ಕುಮಾರ್ ಘೋಷಣೆ ಮಾಡಿದ್ದಾರೆ.  ಈ ಯೋಜನೆಯಿಂದ ರಾಜ್ಯದ ಸುಮಾರು 3.50 ಲಕ್ಷ ರೈತರಿಗೆ ಉಚಿತವಾಗಿ ಸೌರ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಕೇಂದ್ರ ಸರ್ಕಾರದ ಸಹಾಯದೊಂದಿಗೆ ಈ ಯೋಜನೆ ಜಾರಿಗೊಳಿಸಲಾಗುವುದು. ರಾಜ್ಯದಲ್ಲಿ ಒಂದು ಸಾವಿರ ಮೆಗಾ ವ್ಯಾಟ್ ಸಾಮರ್ಥ್ಯದ 1000 ಸೋಲಾರ್ ಫೀಡರ್ ಗಳನ್ನು ಸ್ಥಾಪನೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ನೇರವಾಗಿ ರೈತರ ಕೃಷಿ ಪಂಪ್ಸೆಟ್ ಗಳಿಗೆ ಉಚಿತ ಸೌರ ವಿದ್ಯುತ್ ಪೂರೈಕೆ ಮಾಡಲಾಗುವುದು. 7 ಗಂಟೆ ವಿದ್ಯುತ್ ಪೂರೈಕೆ ಮಾಡಬೇಕೆಂಬ ರೈತರ ಬೇಡಿಕೆ ಈಡೇರಲಿದೆ.