ರಾಜ್ಯದಲ್ಲಿ ವಿದ್ಯುತ್ ಕೊರತೆ ನೀಗಿಸಲು ರಾಜ್ಯ ಸರ್ಕಾರ ದಿಟ್ಟ ಕ್ರಮ: ಸಿಎಂ ಮಾಹಿತಿ

ಬೆಂಗಳೂರು, ಅಕ್ಟೋಬರ್ 22, 2023 (www.justkannada.in): ಉತ್ಪಾದನೆ ಕಡಿಮೆಯಿದ್ದು, ಬೇಡಿಕೆ ಹೆಚ್ಚಿರುವುದರಿಂದ ಅನಿವಾರ್ಯವಾಗಿ ತಾತ್ಕಾಲಿಕ ಒಡಂಬಡಿಕೆಯ ಮೇರೆಗೆ ಹೊರ ರಾಜ್ಯಗಳಿಂದ ವಿದ್ಯುತ್ ಖರೀದಿಗೆ ನಾವು ಮುಂದಾಗಿದ್ದೇವೆ. ವಿದ್ಯುತ್ ಕೊರತೆ ನೀಗಿಸಲು ರಾಜ್ಯ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವೀಕರಿಸಬಹುದಾದ ಇಂಧನ ಮೂಲಗಳ ಪರಿಣಾಮಕಾರಿ ಬಳಕೆಯ ಮೂಲಕ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸುವ ಕಡೆಗೂ ಗಮನ ಹರಿಸಿದ್ದೇವೆ. ಇದು ವಿದ್ಯುತ್ ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ನೆರವಾಗಲಿದೆ ಎಂದು ತಿಳಿಸಿದ್ದಾರೆ.

ವಿದ್ಯುತ್ ಕೊರತೆ ನೀಗಿಸಲು ರಾಜ್ಯ ಸರ್ಕಾರದ ಕ್ರಮಗಳು ಹೀಗಿವೆ…

– ರೈತರಿಗೆ ಮೂರು ಸಾಳಿಯಲ್ಲಿ ನಿರಂತರ 5 ಗಂಟೆಗಳ ವಿದ್ಯುತ್ ಪೂರೈಕೆಗೆ ಸೂಚನೆ
– ಉತ್ತರ ಪ್ರದೇಶದಿಂದ 100 ಮೆ.ವ್ಯಾ ಮತ್ತು ಸಂಜಾಬ್ನಿಂದ 600 ಮೆ.ನ್ಯಾ ವಿದ್ಯುತ್ ಖರೀದಿಗೆ ಸೂಚನೆ
– ವಿದ್ಯುತ್ ಕಾಯ್ದೆಯ ಸೆಕ್ಷನ್ 11 ಜಾರಿ, ರಾಜ್ಯದ ಎಲ್ಲಾ ವಿದ್ಯುತ್ ಉತ್ಪಾದನಾ ಘಟಕಗಳು ಗರಿಷ್ಠ ವಿದ್ಯುತ್ ಉತ್ಪಾದಿಸಿ ರಾಜ್ಯದ ಗ್ರಿಡ್ ಗೆ ಪೂರೈಸುವಂತೆ ಆದೇಶ
– ರಾಜ್ಯದ ಶಾಖೋತ್ಪನ್ನ ವಿದ್ಯುತ್ ಘಟಕಗಳಿಗೆ ಮರುಚಾಲನೆ
– ಈ ಎಲ್ಲಾ ಕಲ್ಲಿದ್ದಲು ಸಂಸ್ಥೆಗಳಿಂದ 15 ಲಕ್ಷ ಮೆಟ್ರಿಕ್ ಟನ್ ಪಡೆಯಲು ಕ್ರಮ
– ಅಲ್ಪಾವಧಿ ಆಧಾರದಲ್ಲಿ 1300 ಮೆ.ವ್ಯಾ ವಿದ್ಯುತ್ ಖರೀದಿಗೆ ಕ್ರಮ
– ಕೆಪಿಸಿಎಲ್ ನ ಆನಿಲ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ಕಾರ್ಯಾಚರಣೆ ಆರಂಭಕ್ಕೆ ಕ್ರಮ
– ಸಾವಗಡದಲ್ಲಿ ಹೆಚ್ಚುವರಿಯಾಗಿ 300 ಮೆ.ವ್ಯಾ ಮತ್ತು ಕಲಬುರಗಿಯಲ್ಲಿ 500 ಮೆ.ವ್ಯಾ ಸೋಲಾರ್ ಪಾರ್ಕ್ ಸ್ಥಾಪನೆ
– ಛತ್ತೀಸ್ ಗಡದಲ್ಲಿ ಖಾಸಗಿ / ಜಂಟಿ ಹೂಡಿಕೆಯಡಿ ಕ್ಯಾಪ್ಟಿವ್ ಕಲ್ಲಿದ್ದಲು ಗಣಿ ಆರಂಭಕ್ಕೆ ಕ್ರಮ
– ಇತರ ರಾಜ್ಯಗಳಲ್ಲಿನ Stressed out ವಿದ್ಯುತ್ ಸ್ಥಾವರಗಳಿಂದ ವಿದ್ಯುತ್ ಖರೀದಿಸಲು ಪ್ರಸ್ತಾಪ