Sunday, September 27, 2026

BDA Apartments

ಮೂಗೂರಿನ ತ್ರಿಪುರ ಸುಂದರಿ ಅಮ್ಮನವರ ದೇವಸ್ಥಾನದಲ್ಲಿ ಕಳ್ಳತನ BDA JK_Adv BDA Adv
Home Crime ಮೂಗೂರಿನ ತ್ರಿಪುರ ಸುಂದರಿ ಅಮ್ಮನವರ ದೇವಸ್ಥಾನದಲ್ಲಿ ಕಳ್ಳತನ

ಮೂಗೂರಿನ ತ್ರಿಪುರ ಸುಂದರಿ ಅಮ್ಮನವರ ದೇವಸ್ಥಾನದಲ್ಲಿ ಕಳ್ಳತನ

ಬೆಂಗಳೂರು, ಜುಲೈ 17, 2022 (www.justkannada.in): ತಿ.ನರಸೀಪುರದ ಐತಿಹಾಸಿಕ, ಪುರಾತನ ದೇವಾಲಯದಲ್ಲಿ ಕಳ್ಳತನವಾಗಿದೆ.

ಹಿಂಬದಿ ಬಾಗಿಲು ಒಡೆದು ಒಳನುಗ್ಗಿ ಮೂಗೂರು ಶ್ರೀ ತ್ರಿಪುರ ಸುಂದರಿ ಅಮ್ಮನ ದೇವಸ್ಥಾನದಲ್ಲಿ ಕಳ್ಳತನ ಮಾಡಲಾಗಿದೆ. ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿರುವ ದೇವಾಲಯದಲ್ಲಿ ತಡರಾತ್ರಿ ಈ ಘಟನೆ ನಡೆದಿದೆ.

ದೇವಿಯ ಮೈ ಮೇಲಿದ್ದ ಲಕ್ಷಾಂತರ ಬೆಲೆ ಬಾಳುವ ಚಿನ್ನಾಭರಣ, ಗೋಲಕದಲ್ಲಿದ್ದ ಹಣವನ್ನು ಖದೀಮರು ಕದ್ದೋಯ್ದಿದ್ದಾರೆ.

ದೇವಸ್ಥಾನದ ಗರ್ಭಗುಡಿ ಪ್ರವೇಶಿಸಿ ಕಳ್ಳತನ ನಡೆಸಿ ಖದೀಮರು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಚೇತನ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಶ್ವಾನ ದಳ ಹಾಗೂ ಪೊಲೀಸ್ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.

ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ನರಸೀಪುರ ತಾಲ್ಲೂಕಿನಲ್ಲಿ ಕಳ್ಳತನ ಪ್ರಕರಣಗಳು ನಿತ್ಯ ಹೆಚ್ಚಾಗುತ್ತಿವೆ. ಕಳ್ಳತನ ಪ್ರಕರಣ ತಡೆಯುವಲ್ಲಿ ಪೊಲೀಸ್ ಇಲಾಖೆ ನಿರ್ಲಕ್ಷ್ಯ ವಹಿಸಿದೆ ಎಂದು ಸಾರ್ವಜನಿಕರು ದೂರಿದ್ದಾರೆ.