2023ರ ಬಜೆಟ್ ನಂತರ ಸರ್ಕಾರಿ ನೌಕರರ ಕನಿಷ್ಠ ವೇತನ ಹೆಚ್ಚಳ ಸಾಧ್ಯತೆ

ಬೆಂಗಳೂರು, ಜನವರಿ 15, 2023 (www.justkannada.in): 2023 ರ ಬಜೆಟ್ ನಂತರ ಸರ್ಕಾರಿ ನೌಕರರ ಕನಿಷ್ಠ ವೇತನವನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂಬ ಸುದ್ದಿ ಹೊರಬಿದ್ದಿದೆ.

ಸರ್ಕಾರಿ ನೌಕರರ ವೇತನದ ಫಿಟ್‌ ಮೆಂಟ್ ಅಂಶವನ್ನು ಪರಿಷ್ಕರಿಸುವ ನಿರ್ಧಾರವನ್ನು ಸರ್ಕಾರ ತೆಗೆದುಕೊಳ್ಳಬಹುದು ಎನ್ನಲಾಗಿದೆ.

ಫಿಟ್‌ ಮೆಂಟ್ ಅಂಶವನ್ನು ಬದಲಾಯಿಸುವಂತೆ ಕೇಂದ್ರ ನೌಕರರಿಂದ ಬಹಳ ದಿನಗಳಿಂದ ಬೇಡಿಕೆ ಇತ್ತು. ಈ ಕುರಿತು ಹಲವು ಸುತ್ತಿನ ಸಭೆಗಳನ್ನು ನಡೆಸಲಾಗಿದೆ.

ಕೇಂದ್ರ ಬಜೆಟ್ 2023 ರ ನಂತರ ಸರ್ಕಾರಿ ನೌಕರರ ವೇತನದ ಕನಿಷ್ಠ ವೇತನವನ್ನು ಹೆಚ್ಚಿಸುವ ಸಾಧ್ಯತೆಯಿದೆ.

ಜನವರಿ 1 ರಿಂದ ಜಾರಿಗೆ ಬರುವಂತೆ ಮಾರ್ಚ್ 2023 ರಲ್ಲಿ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು(ಡಿಎ) ಕೇಂದ್ರ ಸರ್ಕಾರ ಹೆಚ್ಚಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.