ಬೇರಿಂಗ್ ನಲ್ಲಿ ದೋಷವಿದೆ: ಮೆಟ್ರೋ ಪಿಲ್ಲರ್ ನಲ್ಲಿ ಬಿರುಕು ಕಾಣಿಸಿಕೊಂಡಿಲ್ಲ-ಬಿಎಂಆರ್ ಸಿಎಲ್  ಅಧಿಕಾರಿ ಸ್ಪಷ್ಟನೆ…

ಬೆಂಗಳೂರು,ಆ,2,2019(www.justkannada.in):  ಇಂದಿರಾನಗರ ಮೆಟ್ರೋ ಸ್ಟೇಷನ್ ನ ಪಿಲ್ಲರ್ ನಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂದು ವರದಿಯಾದ ಹಿನ್ನೆಲೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಬಿ.ಎಂ.ಆರ್ ಸಿ.ಎಲ್ ಅಧಿಕಾರಿ ಯಶವಂತ್ ಚೌಹಾಣ್  ಮೆಟ್ರೋ ಪಿಲ್ಲರ್ ನಲ್ಲಿ ಯಾವುದೇ ಬಿರುಕು ಕಾಣಿಸಿಕೊಂಡಿಲ್ಲ. ಬೇರಿಂಗ್ ನಲ್ಲಿ ದೋಷ ಉಂಟಾಗಿದೆ ಎಂದು ಹೇಳಿದ್ದಾರೆ.

ಇಂದಿರಾನಗರ ಮೆಟ್ರೋ ಸ್ಟೇಷನ್ ಬಳಿ ಬಿರುಕು ಕಾಣಿಸಿಕೊಂಡಿದ್ದು ಪ್ರಯಾಣಿಕರು ಆತಂಕ ಪಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾದ ಹಿನ್ನೆಲೆ ಈ ಬಗ್ಗೆ ಪ್ರತಿಕ್ರಿಯಿಸಿದ ಬಿಎಂಆರ್ ಸಿಎಲ್ ಅಧಿಕಾರಿ ಯಶ್ವಂತ್ ಚೌಹಾಣ್, ಮೇಟ್ರೋ ಪಿಲ್ಲರ್ ನಲ್ಲಿ ಬಿರುಕು ಕಾಣಿಸಿಕೊಂಡಿಲ್ಲ ಬೇರಿಂಗ್ ನಲ್ಲಿ ದೋಷ ಕಾಣಿಸಿಕೊಂಡಿದೆ. ಹೀಗಾಗಿ ಬೇರಿಂಗ್ ಬದಲಾವಣೆ ಮಾಡಬೇಕು, ಅದ್ದರಿಂದ  ಆಗಸ್ಟ್ 3ರಿಂದ ಆಗಸ್ಟ್ 4ರ ಬೆಳಗ್ಗೆ 11ಗಂಟೆವರೆಗೆ ಬೈಯಪ್ಪನಹಳ್ಳಿಯಿಂದ ಎಂಜಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಇಂದಿರಾನಗರ ಮೆಟ್ರೋ ನಿಲ್ದಾಣದ ಪಿಲ್ಲರ್‌ನಲ್ಲಿ ಬಿರುಕುಬಿದ್ದಿಲ್ಲ, ಸಣ್ಣಪುಟ್ಟ ಕಾಮಗಾರಿಗಳು ನಡೆಯುತ್ತಿವೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿ ಯಶವಂತ್ ಚೌಹಾಣ್ ಸ್ಪಷ್ಟಪಡಿಸಿದ್ದಾರೆ.  ಬೈಯಪ್ಪನಹಳ್ಳಿಯಿಂದ ಎಂಜಿ ರಸ್ತೆ ಮೆಟ್ರೋ ನಿಲ್ದಾಣದವರೆಗೆ ರೈಲು ಸೇವೆ ಸ್ಥಗಿತಗೊಳಿಸುತ್ತಿರುವುದರಿಂದ ಬಿಎಂಟಿಸಿಯು ಪ್ರಯಾಣಿಕರ ದಟ್ಟಣೆ ಅನುಗುಣವಾಗಿ ಹೆಚ್ಚುವರಿ ಬಸ್‌ಗಳನ್ನು ಓಡಿಸಲು ತೀರ್ಮಾನಿಸಿದೆ.

Key words:    There is no -crack – Metro- Pillar-BMRCL- officer -clarified.