ಬಂದ್ ಮಾಡುವ ಅವಶ್ಯಕತೆಯಿರಲಿಲ್ಲ : ಕೃಷಿ ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು,ಸೆಪ್ಟೆಂಬರ್,28,2020(www.justkannada.in)  : ಬಂದ್ ಮಾಡುವ ಅವಶ್ಯಕತೆಯಿರಲಿಲ್ಲ. ಆದರೆ, ಇಂದು ಕರ್ನಾಟಕ ಬಂದ್ ಮಾಡಿರುವುದು ದುರದೃಷ್ಟಕರ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಬೇಸರವ್ಯಕ್ತಪಡಿಸಿದ್ದಾರೆ.jk-logo-justkannada-logo

ರೈತ ಮುಖಂಡರೊಂದಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸಭೆ ಮಾಡಿ ತಿದ್ದುಪಡಿಯಿಂದ ರೈತರಿಗಾಗುವ ಲಾಭಗಳ ಬಗ್ಗೆ ಮಾಹಿತಿ ನೀಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಈ ಬಗ್ಗೆ ಮಾಹಿತಿ ಹಂಚಿಕೊಂಡು ರೈತರಲ್ಲಿ ಜಾಗೃತಿ  ಮೂಡಿಸುವ ಕೆಲಸವನ್ನು ಮಾಡಿದ್ದಾರೆ. ಆದರೂ, ಬಂದ್ ಮಾಡಿರುವುದು ದುರದೃಷ್ಟಕರ ಸಂಗತಿ ಎಂದಿದ್ದಾರೆ.

ಅನವಶ್ಯಕವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಬಂದ್ ಗೆ ಬೆಂಬಲ ಕೊಟ್ಟಿದ್ದಾರೆ. 2019ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ತನ್ನ ಪ್ರಣಾಳಿಕೆಯಲ್ಲಿ ಎಪಿಎಂಸಿ ಕಾಯ್ದೆಯನ್ನು ತೆಗಿಯಬೇಕು ಎಂದು ಹೇಳಿದ್ದರು.

There-need-Bandh-Agriculture-Minister B.c.patel

ಭೂ ಸೂಧಾರಣೆ ಕಾಯ್ದೆಯು 79 ಮತ್ತು 80 ಕಲಂ ಕೈಬಿಡಬೇಕು ಎಂದು ಈ ಹಿಂದೆ ಪ್ರಿಯಾಂಕ್ ಖರ್ಗೆ, ದೇಶಪಾಂಡೆ, ಡಿಕೆಶಿ ಅವರೇ ವಿಧಾನಸಭೆಯಲ್ಲಿ ಹೇಳಿದ್ದರು. ಆದರೆ, ಈಗ ಬಂದ್ ಗೆ ಬೆಂಬಲ ಸೂಚಿಸಿರುವುದು ಅವರ ದ್ವಿಮುಖ ನೀತಿ ತೋರಿಸುತ್ತಿದೆ ಎಂದು ಟೀಕಿಸಿದರು.

key words : There-need-Bandh-Agriculture-Minister B.c.patel