ಇದು ದಪ್ಪ ಚರ್ಮದ ಸರ್ಕಾರ: ಕೋಮುವಾದದ ಅಫೀಮು ಪಠ್ಯಪುಸ್ತಕದಲ್ಲಿ ಸೇರಿಸುವುದು ಇವರ ಉದ್ದೇಶ- ಹೆಚ್.ಸಿ ಮಹದೇವಪ್ಪ.

 

ಮೈಸೂರು,ಜೂನ್,24,2022(www.justkannada.in): ಪರಿಷ್ಕೃತ ಪಠ್ಯಕ್ರಮ ವಾಪಸ್ಸ್ ಪಡೆಯುವುದಿಲ್ಲವೆಂಬ ಸರ್ಕಾರದ ನಿಲುವನ್ನು ಖಂಡಿಸಿರುವ ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ, ಇದು ದಪ್ಪ ಚರ್ಮದ ಸರ್ಕಾರ: ಕೋಮುವಾದದ ಅಫೀಮು ಪಠ್ಯಪುಸ್ತಕದಲ್ಲಿ ಸೇರಿಸುವುದು ಇವರ ಉದ್ದೇಶವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಮಾಜಿ ಸಚಿವ ಹೆಚ್.ಡಿ.ಮಹಾದೇವಪ್ಪ, ಇದು ದಪ್ಪ ಚರ್ಮದ ಸರ್ಕಾರ. ಅವರಿಗೆ ಕಣ್ಣು ಕಾಣುವುದಿಲ್ಲ, ಕಿವಿಯೂ ಕೇಳುವುದಿಲ್ಲ. ಜನಾಭಿಪ್ರಾಯಕ್ಕೆ ಈ ಸರ್ಕಾರ ಯಾವತ್ತೂ ಮನ್ನಣೆ ನೀಡಿಲ್ಲ. ಇದು ಕೋಮುವಾದದ ಅಫೀಮನ್ನು ಪಠ್ಯಪುಸ್ತಕದಲ್ಲಿ ಸೇರಿಸುವುದು ಇವರ ಉದ್ದೇಶ. ಇದಕ್ಕಾಗಿ ಯಾರ ಮಾತನ್ನೂ ಕೇಳುತ್ತಿಲ್ಲ. ಈ ಸರ್ಕಾರಕ್ಕೆ ಅಂಬೇಡ್ಕರ್, ಬಸವಣ್ಣ, ಕುವೆಂಪು, ಕನಕದಾಸರು ಯಾರ ಮೇಲೂ ಗೌರವ ಇಲ್ಲ, ಇದು ಪಠ್ಯ ಪರಿಷ್ಕರಣೆಯ ಮೂಲಕ ಮತ್ತೆ ಸಾಬೀತಾಗಿದೆ. ಬರಗೂರು ಸಮಿತಿ ತಪ್ಪು ಮಾಡಿಲ್ವಾ ಎಂದು ಇವರು ಈಗ ಹೇಳುವುದು ಸಮರ್ಥನೀಯವಲ್ಲ ಎಂದು ಕಿಡಿಕಾರಿದರು.

ಜಾತಿ ನೋಡಿ ಅವರಿಗೆ ಸ್ಥಾನಕೊಡುವುದಾದರೆ ಅದು ತಪ್ಪು.

ರಾಷ್ಟ್ರಪತಿ ಹುದ್ದೆಗೆ ದ್ರೌಪದಿ ಮುರ್ಮು ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ಸಿ ಮಹದೇವಪ್ಪ, ಇದು ಸಾಮಾಜಿಕ ನ್ಯಾಯದ ಸಂಕೇತವಲ್ಲ. ಪ್ರಧಾನಿ ಹುದ್ದೆ, ರಾಷ್ಟ್ರಪತಿ ಹುದ್ದೆ, ಮುಖ್ಯಮಂತ್ರಿ ಹುದ್ದೆಯನ್ನು ಜಾತಿಯಿಂದ ನೋಡುವುದೇ ಸಂವಿಧಾನಕ್ಕೆ ಮಾಡುವ ಅಪಮಾನ. ದ್ರೌಪದಿ ಮುರ್ಮು ಅವರು ಬಿಜೆಪಿಯಲ್ಲಿ ಹಲವು ಘಟಕಗಳಲ್ಲಿ ಕೆಲಸ ಮಾಡಿದ್ದಾರೆ. ಜಾತಿ ನೋಡಿ ಅವರಿಗೆ ಸ್ಥಾನಕೊಡುವುದಾದರೆ ಅದು ತಪ್ಪು. ಅವರ ಕಾರ್ಯ ವೈಖರಿ ನೋಡಿ ಸ್ಥಾನ ಕೊಡಬೇಕು. ಬಿಜೆಪಿ ಇದರಲ್ಲೂ ಜಾತಿ ನಮೂದಿಸುತ್ತಾ ಸಂವಿಧಾನಕ್ಕೆ ಅಗೌರವ ತೋರುತ್ತಿದೆ ಎಂದು ಆರೋಪಿಸಿದರು.

ಮೈಸೂರಿನ ಅಭಿವೃದ್ಧಿ ಚರ್ಚೆಗೆ ಸಿದ್ದರಾಮಯ್ಯ ಹಾಗೂ ಮಹಾದೇವಪ್ಪ ಬರಲಿ ಎಂಬ ಪ್ರತಾಪ್ ಸಿಂಹ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಚಿವ ಡಾ.ಮಹಾದೇವಪ್ಪ, ನಾವು ಮಾಡಿರುವ ಅಭಿವೃದ್ಧಿ ಕಣ್ಣಿಗೆ ಕಾಣುತ್ತಿದೆ. ಏನೂ ಕೆಲಸ ಮಾಡದೇ ಬರೀ ಬೊಗಳೆ ಬಿಟ್ಟುಕೊಂಡು ಅವರು ಓಡಾಡುತ್ತಿದ್ದಾರೆ. ಬರಿ ಬೊಗಳೆ ಬಿಟ್ಟು ಓಡಾಡುವವರ ಜೊತೆ ಏನು ಚರ್ಚೆ ಮಾಡುವುದು. ಅವರು ಏನಾದರೂ ಅಭಿವೃದ್ಧಿ ಮಾಡಿದ್ದರೆ ತಾನೇ ಚರ್ಚೆ ಮಾಡೋದು. ಸುಮ್ಮನೆ ಕೆಲಸಕ್ಕೆ ಬಾರದ ಮಾತುಗಳನ್ನು ಆಡುತ್ತಾ ಕೂತಿದ್ದಾರೆ. ನಾವು ಜಿಲ್ಲಾಸ್ಪತ್ರೆ ಕಟ್ಟದಿದ್ದರೆ ಕೋವಿಡ್ ಸಂದರ್ಭದಲ್ಲಿ ರೋಗಿಗಳನ್ನು ಎಲ್ಲಿ ಮಲಗಿಸುತ್ತಿದ್ದರು. ಇಂತಹ ನೂರು‌ ಕೆಲಸ ಮಾಡಿದ್ದೇವೆ ಎಂದು ತಿರುಗೇಟು ನೀಡಿದರು.

ಮತ್ತೆ ಪ್ರತ್ಯೇಕ ರಾಜ್ಯದ ಧ್ವನಿ ಎತ್ತಿದ ಉಮೇಶ್ ಕತ್ತಿಗೆ ಟಾಂಗ್ ನೀಡಿದ ಮಾಜಿ‌ ಸಚಿವ ಹೆಚ್.ಸಿ.ಮಹಾದೇವಪ್ಪ, ಕತ್ತಿ ನನಗೆ ಒಳ್ಳೆಯ ಸ್ನೇಹಿತ. ಆದರೆ ಅವನೊಬ್ಬ ಬುದ್ದಿ ಇಲ್ಲದ ಅವಿವೇಕಿ. ಮಾಡೋದಕ್ಕೆ ಕೆಲಸ ಇಲ್ಲದೇ ಏನೇನೋ ಕೆರೆದುಕೊಳ್ಳುತ್ತಿದ್ದಾನೆ. ಅರಣ್ಯ ಇಲಾಖೆಯಂತ ಬಹುಮುಖ್ಯ ಖಾತೆ ಇದ್ದರೂ ಕೆಲಸ ಇಲ್ಲದಂತೆ ಇದ್ದಾನೆ. ಕತ್ತಿ ಮುಖ್ಯಮಂತ್ರಿ ಆಗುವ ಆಸೆ ಇದ್ರೆ ಇಲ್ಲೇ ಆಗಲಿ. ಅದಕ್ಯಾಕೆ ಪ್ರತ್ಯೇಕ ರಾಜ್ಯ ಬೇಕು ನಿನಗೆ. ಉತ್ತರ ಕರ್ನಾಟಕ ಅಭಿವೃದ್ಧಿ ಆಗಲಿಲ್ಲ ಅಂದ್ರೆ ಅದಕ್ಕೆ ಹೊಣೆ ಯಾರಪ್ಪ. ಅವತ್ತಿನಿಂದ ಅಲ್ಲಿ ಅಧಿಕಾರದಲ್ಲಿ ಇರುವವರು ನೀವೆ ತಾನೇ. ಏನು ಆಗಿದೆ, ಏನು ಆಗಿಲ್ಲ ಎಂಬ ಪಟ್ಟಿ ನಿನ್ನ ಬಳಿಯೇ ಇರುತ್ತೆ ನೋಡಿಕೋ. ಲಕ್ಷಾಂತರ ಜನರ ಹೋರಾಟದ ಫಲವಾಗಿ ಅಖಂಡ ಕರ್ನಾಟಕ ಸೃಷ್ಠಿಯಾಗಿದೆ. ಇದನ್ನು ಪದೇಪದೇ ಒಡೆಯುವ ಮಾತನಾಡಬೇಡಿ. ಚುನಾವಣೆ ಹತ್ತಿರ ಬಂದಾಗಲೆಲ್ಲಾ ಇಂತಹ ಬೇಜವಾಬ್ದಾರಿ ಕೂಗು ಶುರು ಮಾಡುತ್ತಾರೆ ಎಂದು ಟೀಕಿಸಿದರು.

Key words: thick-skinned –government-include -communal –opium- textbook – HC Mahadevappa.

ENGLISH SUMMARY…

It is a thick-skinned govt.: It is their objective to include communal lessons in school textbooks – H.C. Mahdevappa
Mysuru, June 24, 2022 (www.justkannada.in): Former Minister H.C. Mahadevappa criticized the State Government, which has refused to withdraw the revised school textbook curriculum. “This is a thick-skinned government. It is their objective to include hatred in school textbooks,” he observed.
Speaking in Mysuru today, he said, “the State Govt. is blind and deaf. They won’t respect people’s mandate. They intend to include lessons that spread hatred among the children. That is why they are not listening to anybody. This government does not have respect for anybody, including Dr. B.R. Ambedkar, Basavanna, Kuvempu, Kanakadasa, etc. It is proven again through the recent revision of school textbooks. It is not correct for them to ask whether the litterateur Baraguru Ramachandrappa-led committee had not committed a mistake,” he said.
Keywords: Former Minister H.C. Mahadevappa/ school textbook revision/ thick-skinned government