ಮೈಸೂರು,ನವೆಂಬರ್,28,2025 (www.justkannada.in): ಒಂದೇ ರಾತ್ರಿ ಮೂರು ಅಂಗಡಿಗಳಲ್ಲಿ ದರೋಡೆ ಮಾಡಿ ಕೊನೆಗೆ ಮೂವರು ಕಳ್ಳರು ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದು ಪೊಲೀಸರು ಬಂಧಿಸಿದ್ದಾರೆ.
ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಪ್ರತಾಪ್ (21), ಮಹಾಲಿಂಗ(35), ಓರ್ವ ಅಪ್ರಾಪ್ತ ಬಂಧಿತ ಆರೋಪಿಗಳು. ಮೂವರು ಆರೋಪಿಗಳು ಹೆಡಿಯಾಲ ಗ್ರಾಮದ ಬಸ್ ನಿಲ್ದಾಣದ ಬಳಿ ದಿನಸಿ ಅಂಗಡಿ ಮದ್ಯದಂಗಡಿಯ ಬೀಗ ಮುರಿದು ಕಳ್ಳತನ ಮಾಡಿದ್ದರು. ಈ ವೇಳೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ರವಾನೆ ಮಾಡಿದ್ದು ಗ್ರಾಮಸ್ಥರ ನೆರವಿನಿಂದ ಪೊಲೀಸರು ಕಳ್ಳರನ್ನು ಸೆರೆ ಹಿಡಿದಿದ್ದಾರೆ.
ಬಂಧನದ ವೇಳೆ ದರೋಡೆಕೋರರು ಮಾರಕಾಸ್ತ್ರಗಳಿಂದ ಬೆದರಿಸಲು ಯತ್ನಿಸಿದ್ದು, ಈ ಸಮಯದಲ್ಲಿ ಓರ್ವ ಕಳ್ಳ ತಪ್ಪಿಸಿಕೊಂಡು ಓಡಲು ಯತ್ನಿಸಿದ್ದು ಆತನನ್ನೂ ಪೊಲೀಸರು ಬಂಧಿಸಿದರು. ಇನ್ನು ಶೋಕಿಗಾಗಿ ಕಳ್ಳತನ ಮಾಡುತ್ತಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ.
Key words: Thieves, robbed, arrested, caught, red-handed, Mysore







