ಬಿಎಸ್ ವೈ ಆಪ್ತನ ಮೇಲೆ ಐಟಿ ದಾಳಿ ವಿಚಾರ: ಬಿಜೆಪಿಯ ಆಂತರಿಕ ವಿಷಯ ಇರಬಹುದು ಎಂದ್ರು ಹೆಚ್.ಡಿ ಕುಮಾರಸ್ವಾಮಿ.

ಕಲಬುರಗಿ,ಅಕ್ಟೋಬರ್,7,2021(www.justkannada.in):  ರಾಜ್ಯದಲ್ಲಿ ಸಿಎಂ ಬಿಎಸ್ ವೈ ಆಪ್ತ ಸೇರಿ ಹಲವು ಗುತ್ತಿಗೆದಾರರು, ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ ನಡೆಸಿದೆ. ಟಿ ಈ ನಡುವೆ ಬಿಎಸ್ ವೈ ಆಪ್ತರ ನಿವಾಸದ ಮೇಲೆ ಈ ದಾಳಿ ಮಾಡಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಹೆಚ್.ಡಿ ಕುಮಾರಸ್ವಾಮಿ ಐಟಿ ದಾಳಿ ನಡೆಸಿದ್ದು ಬಿಜೆಪಿಯ ‘ಆಂತರಿಕ ವಿಷಯ’ ಇರಬಹುದು ಎಂದು ಲೇವಡಿ ಮಾಡಿದ್ದಾರೆ.

ಇನ್ನು ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿರುವುದಕ್ಕೆ ಜೆಡಿಎಸ್ ಟೀಕಿಸಿದ ಮಾಜಿ ಸಿಎಂ ಸಿದ್ಧರಾಮಯ್ಯಗೆ ತಿರುಗೇಟು ನೀಡಿರುವ ಹೆಚ್.ಡಿ ಕುಮಾರಸ್ವಾಮಿ,. ನಮ್ಮ ಪಕ್ಷದ ಬಗ್ಗೆ ಮಾತನಾಡಲು ಸಿದ್ದರಾಮಯ್ಯ ಯಾರು? ಜಾತ್ಯತೀತ ಶಕ್ತಿಗಳನ್ನು ಒಗ್ಗೂಡಿಸಲು ಮತ್ತು ಅಲ್ಪಸಂಖ್ಯಾತರಿಗೆ ಸಿದ್ದರಾಮಯ್ಯ ಏನು ಕೊಡುಗೆ ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಅಲ್ಪಸಂಖ್ಯಾತರೇ ಸಿದ್ದರಾಮಯ್ಯ ವಿರುದ್ಧ ತಿರುಗಿ ಬೀಳುತ್ತಾರೆ ಎಂದು ನಾನು ಎಚ್ಚರಿಸಲು ಬಯಸುತ್ತೇನೆ ಎಂದು ಕಿಡಿಕಾರಿದರು.

ಯಾರಿಗೆ ಟಿಕೆಟ್‌ ಕೊಡಬೇಕು. ಯಾರಿಗೆ ಕೊಡಬಾರದು ಎಂಬುದನ್ನು ಕೇಳುವ ಹಕ್ಕು ಸಿದ್ದರಾಮಯ್ಯ ಅವರಿಗೆ ಇಲ್ಲ. ಅವರು ಯಾವ ಸೀಮೆಯ ದೊಣ್ಣೆನಾಯಕ ಎಂದು ನಮ್ಮ ಪಕ್ಷದ ವಿಚಾರದಲ್ಲಿ ತಲೆ ಹಾಕುತ್ತಾರೆ’ ಎಂದು ಹೆಚ್.ಡಿಕೆ ಪ್ರಶ್ನಿಸಿದರು.

Key words: Thinking -IT attack – former CM-HD Kumaraswamy – inner subject – BJP.