ನಾನು ಒಂದಲ್ಲ ಮೂರು ಮೆಟ್ಟಿಲು ಇಳಿಯಲು ಸಿದ್ಧ: ಟಿಕೆಟ್ ವಿಚಾರದಲ್ಲಿ ಪಕ್ಷದ ನಿರ್ಧಾರಕ್ಕೆ ಬಿಟ್ಟಿದ್ದೇವೆ- ಮಾಜಿ ಸಚಿವ ಕಿಮ್ಮನೆ ರತ್ನಾಕರ್.

ಬೆಂಗಳೂರು,ಏಪ್ರಿಲ್,1,2023(www.justkannada.in):  ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಮಂಜುನಾಥ ಗೌಡ ನಡುವೆ ಪೈಪೋಟಿ ಇದ್ದು ಈ ಸಂಬಂಧ ಇಂದು ಸಭೆ ನಡೆಸಲಾಗಿತ್ತು.

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಈಗಾಗಲೇ ಬಿಡುಗಡೆ ಮಾಡಿದ್ದು ಈ ಪಟ್ಟಿಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಗೆ ಟಿಕೆಟ್ ನೀಡದೆ ಕಾಂಗ್ರೆಸ್ ಶಾಕ್ ನೀಡಿತ್ತು. ಇದೀಗ ಬಂಡಾಯ ಶಮನಕ್ಕೆ ಇಂದು ಕಾಂಗ್ರೆಸ್ ನಾಯಕರು ಸಭೆ ನಡೆಸಿದ್ದು ಸಭೆ ಯಶಸ್ವಿಯಾಗಿದೆ ಎನ್ನಲಾಗಿದೆ.

ಈ ಕುರಿತು ಮಾತನಾಡಿರುವ ಮಾಜಿ ಸಚಿವ  ಕಿಮ್ಮನೆ ರತ್ನಾಕರ್, ನಾನು ಮಂಜುನಾಥ ಗೌಡ ಒಟ್ಟಿಗೆ ಕೆಲಸ ಮಾಡುತ್ತೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಮೊದಲ ಪಟ್ಟಿಯಲ್ಲಿ ಟಿಕೆಟ್ ತಪ್ಪಿದೆ ಯಾರ ವಕ್ರದೃಷ್ಠಿ  ಬಿದ್ದಿದೆಯೋ ಗೊತ್ತಿಲ್ಲ.  ಎಲ್ಲವನ್ನೂ ಹೇಳೋಕೆ ನಾನು ಜ್ಯೋತಿಷ್ಯ ಕಲಿಯಬೇಕು.

ನಾನು ಒಂದಲ್ಲ ಮೂರು ಮೆಟ್ಟಿಲು ಇಳಿಯಲು ಸಿದ‍್ಧನಾಗಿರುವೆ.  ಸಭೆಯಲ್ಲಿ ನಮ್ಮಿಬ್ಬರ ಕಡೆಯಿಂದ  ಒಂದೇ ರೀತಿ ಪ್ರತಿಕ್ರಿಯೆ ಬಂದಿದೆ.  ಟಿಕೆಟ್ ವಿಚಾರದಲ್ಲಿ ಅಂತಿಮವಾಗಿ ಪಕ್ಷದ ನಿರ್ಧಾರಕ್ಕೆ ಬಿಟ್ಟಿದ್ದೇವೆ ನಾವಿಬ್ಬರು ಒಟ್ಟಾಗಿ ಕೆಲಸ ಮಾಡುವುದಾಗಿ ಹೇಳಿದ್ದೇವೆ ಎಂದು ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ.

Key words: thirthahalli-congress-ticket- Former minister- Kimmane Ratnakar.