ಸರ್ಕಾರಿ ಜಮೀನು, ಅರಣ್ಯದ ಅಂಚಿನ ಜಾಗಗಳಲ್ಲಿ ಮನೆ ನಿರ್ಮಿಸಿಕೊಂಡವರ ಎತ್ತಂಗಡಿ ಮಾಡಲ್ಲ: ಸಚಿವ ಆರ್.ಅಶೋಕ್

ಬೆಂಗಳೂರು, ಜನವರಿ 22, 2022 (www.justkannada.in): ಸರ್ಕಾರಿ ಜಮೀನು ಹಾಗೂ ಅರಣ್ಯದ ಅಂಚಿನ ಜಾಗಗಳಲ್ಲಿ ಮನೆಗಳನ್ನು ನಿರ್ಮಿಸಿಕೊಂಡಿರುವ ಅರ್ಹ ಬಡ ಜನರನ್ನು ಅಲ್ಲಿಂದ ಎತ್ತಂಗಡಿ ಮಾಡಲು ಅವಕಾಶ ನೀಡುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

.94 ಸಿ ಹಾಗೂ 94 ಸಿಸಿ ಅಡಿ ಅವರು ಅರ್ಜಿ ನೀಡಿದರೆ ಅವರಿಗೆ ನಿವೇಶನದ ಹಕ್ಕುಗಳನ್ನು ನೀಡಲಾಗುವುದು.ಬರುವ ತಿಂಗಳಿನಿಂದ ಪಡಿತರೆ ವಿತರಣೆ ಪ್ರಮಾಣವನ್ನು ಪುನಃ 10 ಕೆಜಿಗೆ ಹೆಚ್ಚಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.

ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ರಾಗಿಯ ರಾಶಿಪೂಜೆ ಸಲ್ಲಿಸಿ,ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಈ ವಿಷಯ ತಿಳಿಸಿದ್ದಾರೆ.

ಬಡ ನಿವೇಶನ ರಹಿತರ ಹಕ್ಕುಗಳನ್ನು ಕಾಯಲು ಸರ್ಕಾರ ಬದ್ಧವಾಗಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಬರುತ್ತಿದ್ದ ಪಡಿತರ ಸ್ಥಗಿತವಾಗಿರುವದರಿಂದ ಪಡಿತರ ವಿತರಣೆ ಪ್ರಮಾಣ ಇಳಿಕೆಯಾಗಿದೆ.ಪುನಃ ಈ ಪ್ರಮಾಣ ಹೆಚ್ಚಿಸಲು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಅಗತ್ಯ ಕ್ರ‌ಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.