ಕೆಪಿಸಿಸಿ ವಕ್ತಾರೆಗೆ ಬೆದರಿಕೆ ಕರೆ.

ಬೆಂಗಳೂರು,ಜೂನ್,12,2021(www.justkannada.in): ಕೆಪಿಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿ ಅವರಿಗೆ ಬೆದರಿಕೆ ಕರೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.jk

ಈ ಕುರಿತು ಸ್ವತಃ ಕೆಪಿಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿ ಅವರೇ ಸ್ಪಷ್ಟಪಡಿಸಿದ್ದಾರೆ.  ಲಸಿಕಾ ಬಗ್ಗೆ ಚರ್ಚಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೆ. ಚರ್ಚಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ನನಗೆ ಬೆದರಿಕೆ ಕರೆ ಬರುತ್ತಿವೆ. ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ರು. ಈ ಬಗ್ಗೆ ವಿಪಕ್ಷ ನಾಯಕರ ಗಮನಕ್ಕೂ ತಂದಿದ್ದೇನೆ ಎಂದರು.

ನನ್ನ ವಿರುದ್ಧ ಇದು ಷಡ್ಯಂತ್ರವಾಗಿದೆ. ಈ ಬಗ್ಗೆ  ಪೊಲೀಸರಿಗೆ ದೂರು ನೀಡಿದ್ದೇನೆ. ಈ ಕುರಿತು ತನಿಖೆಯಾಗಬೇಕು ಎಂದು ಕೆಪಿಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿ ಆಗ್ರಹಿಸಿದರು.

Key words:  threatening -call – KPCC- spokesman.