Sunday, September 6, 2026

BDA Apartments

Home Front Page ಇಂದಿನಿಂದ ಮೂರು ದಿನ ಸಂಸತ್ ವಿಶೇಷ ಅಧಿವೇಶನ

ಇಂದಿನಿಂದ ಮೂರು ದಿನ ಸಂಸತ್ ವಿಶೇಷ ಅಧಿವೇಶನ

ನವದೆಹಲಿ,ಏಪ್ರಿಲ್,16,2026 (www.justkannada.in): ಇಂದಿನಿಂದ ಮೂರು ದಿನಗಳ ಕಾಲ ಸಂಸತ್ ವಿಶೇಷ ಅಧಿವೇಶನ ನಡೆಯಲಿದ್ದು,  ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ 33% ಮಹಿಳಾ ಮೀಸಲು ಜಾರಿಯನ್ನು ತ್ವರಿತಗೊಳಿಸುವ ಸಲುವಾಗಿ ಮೂರು ಮಹತ್ವದ ವಿಧೇಯಕಗಳನ್ನು ಮಂಡನೆಯಾಗಲಿದೆ.

ಲೋಕಸಭೆ ಸ್ಥಾನಗಳ ಸಂಖ್ಯೆಯನ್ನು 850 ಕ್ಕೆ ಹೆಚ್ಚಿಸುವ, 2011ರ ಜನಗಣತಿ ಆಧಾರದ ಮೇಲೆ ಕ್ಷೇತ್ರ ಮರುವಿಂಗಡಣೆ ಮಾಡುವ ಸಂಬಂಧ ವಿಧೇಯಕಗಳನ್ನು ಮಂಡಿಸಿ ಅನುಮೋದನೆ ಪಡೆಯಲು ಕೇಂದ್ರ ಸರ್ಕಾರ ಸಜ್ಜಾಗಿದೆ.  ಅಂತೆಯೇ ‘ನಾರಿ ಶಕ್ತಿ ವಂದನ್‌ ಅಧಿನಿಯಮ 2023’ಕ್ಕೆ ತಿದ್ದುಪಡಿಯೂ ಸಹ ವಿಶೇಷ ಅಧಿವೇಶನದಲ್ಲಿ ಮಂಡನೆಯಾಗಲಿಎ.

ಕ್ಷೇತ್ರ ಮರುವಿಂಗಡಣೆಗೆ ಅವಕಾಶ ಕಲ್ಪಿಸುವ ಸಂವಿಧಾನ ತಿದ್ದುಪಡಿ (131ನೇ ತಿದ್ದುಪಡಿ) ವಿಧೇಯಕಕ್ಕೆ ಕಾಂಗ್ರೆಸ್‌ ಸೇರಿದಂತೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಇದು ದೇಶವಿರೋಧಿ ನಡೆ ಎಂದು ಕಿಡಿಕಾರಿದ್ದಾರೆ. ವಿಧೇಯಕದ ವಿರುದ್ಧ ಮತ ಚಲಾಯಿಸುವುದಾಗಿ ಕಾಂಗ್ರೆಸ್‌ ಬಹಿರಂಗವಾಗಿ ಘೋಷಿಸಿದೆ.

Key words: Three-day, special session , Parliament, from, today