ಇಂದಿನಿಂದ ಮೂರು ದಿನಗಳ ಕಾಲ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರು, ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ…

ಮೈಸೂರು,ಆ,17,2020(www.justkannada.in): ಶ್ರಾವಣ ಮಾಸದ ಪೂಜೆ, ಎಣ್ಣೆ ಮಜ್ಜನ ಹಾಗೂ ಅಮಾವಾಸ್ಯೆ ವಿಶೇಷ ಪೂಜೆ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತಾದಿಗಳ ಪ್ರವೇಶಕ್ಕೆ  ನಿರ್ಬಂಧ ವಿಧಿಸಲಾಗಿದೆ.jk-logo-justkannada-logo

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ ಶ್ರಾವಣ ಮಾಸದ ಪೂಜೆ, ಎಣ್ಣೆ ಮಜ್ಜನ ಹಾಗೂ ಅಮಾವಾಸ್ಯೆ ವಿಶೇಷ ಪೂಜೆ ನೆರವೇರಲಿದ್ದು ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವ ಸಾಧ್ಯತೆ ಇದೆ. ಹೀಗಾಗಿ ಇಂದಿನಿಂದ ಆಗಸ್ಟ್ 19ರವರೆಗೆ ಸಾರ್ವಜನಿಕರು ಹಾಗೂ ಭಕ್ತರ ಪ್ರವೇಶಕ್ಕೆ ನಿಷೇಧ ವಿಧಿಸಲಾಗಿದೆ.three-days-devotees-maha-mahadeshwara-hills-restricted-public

ಕೊರೊನಾ ಹರಡುವಿಕೆ ತಡೆಯಲು ಚಾಮರಾಜನಗರ ಜಿಲ್ಲಾಡಳಿತ ಮಲೆಮಹದೇಶ್ವರ ದೇಗುಲಕ್ಕೆ ಭಕ್ತಾದಿಗಳಿಗೆ ನಿರ್ಬಂಧ  ವಿಧಿಸುವ ಮೂಲಕ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡಿದೆ. ದೇವಾಲಯದ ಸಿಬ್ಬಂದಿ, ಆಡಳಿತ ವರ್ಗ, ಸ್ಥಳೀಯರು ಹಾಗೂ ತುರ್ತು ಸೇವೆಯ ವಾಹನಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

Key words: Three days -devotees – Maha Mahadeshwara Hills – restricted – public