ಎರಡು ಸರ್ಕಾರಿ ಬಸ್, ಜೀಪ್ ನಡುವೆ ಭೀಕರ ಅಪಘಾತ: ಮೂವರು ಮೃತ

ಕಲಬುರಗಿ, ಡಿಸೆಂಬರ್,​​ 11,2025 (www.justkannada.in): ಎರಡು ಕೆಎಸ್ ​​ಆರ್​​ಟಿಸಿ ಬಸ್​ ಮತ್ತು ಜೀಪ್ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಕಲಬುರಗಿಯ ಸಂಚಾರಿ ಠಾಣೆ 1ರ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಂಡ ಹೆಂಡತಿ ಸೇರಿ ಮೂವರು ಸಾವನ್ನಪ್ಪಿದ್ದಾರೆ. ಸುಲೋಚನಾ(70), ಚಂದ್ರಕಾಂತ್ (82) ಮತ್ತು ಚಾಲಕ ಮಿಟ್ಟೆಸಾಬ್(35) ಮೃತರು. ಇನ್ನು ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸಾವನ್ನಪ್ಪಿದವರು ಅಫಜಲಪುರ ತಾಲ್ಲೂಕಿನ ತೆಲ್ಲೂಣಗಿ ಗ್ರಾಮದ ನಿವಾಸಿಗಳು ಎನ್ನಲಾಗಿದ್ದು,  ದಂಪತಿ ತಮ್ಮ ಗ್ರಾಮದಿಂದ ಕಲಬುರಗಿಗೆ ಜೀಪ್​​ ನಲ್ಲಿ ತೆರಳುತ್ತಿದ್ದರು. ಅತಿವೇಗದ ಚಾಲನೆನಿಂದ ಎದುರಿಗೆ ಬರುತ್ತಿದ್ದ ಬಸ್​ ಗೆ ಜೀಪ್ ಡಿಕ್ಕಿಯಾಗಿ ಈ ಅವಘಡ ‌ ಸಂಭವಿಸಿದೆ. ಈ ಕುರಿತು ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Three, dead, horrific, accident, government bus, jeep