Sunday, September 13, 2026

BDA Apartments

ಭೀಕರ ಅಪಘಾತದಲ್ಲಿ ಮೂವರು ಸಾವು BDA JK_Adv BDA Adv
Home Crime ಭೀಕರ ಅಪಘಾತದಲ್ಲಿ ಮೂವರು ಸಾವು.

ಭೀಕರ ಅಪಘಾತದಲ್ಲಿ ಮೂವರು ಸಾವು.

ಮಂಗಳೂರು, ಮಾರ್ಚ್,13,2026 (www.justkannada.in): ಕೆಎಸ್ ಆರ್ ಟಿಸಿ ರಾಜಹಂಸ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ  ಅಪಘಾತ ಸಂಭವಿಸಿ  ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ  ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಶಿರಾಡಿಘಾಟ್​​​ ನ ಗುಂಡ್ಯ ಬಳಿ ನಡೆದಿದೆ.

ಉಜಿರೆ ನಿವಾಸಿಗಳಾದ ಶ್ರೀಧರ ಮರಕಡ, ಜನಾರ್ದನ ಕೆರಿಮಾರ್ ಹಾಗೂ ಕೊಕ್ಕಡ ನಿವಾಸಿ ಚಂದ್ರಶೇಖರಗೌಡ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇನ್ನೋರ್ವ ಸುರೇಶ್ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನಾಲ್ವರು ಒಂದೇ ಕಾರಿನಲ್ಲಿ ಸಕಲೇಶಪುರದಲ್ಲಿ ಮದುವೆ ಮುಗಿಸಿಕೊಂಡು ವಾಪಸ್ ಉಜಿರೆ ಕಡೆ ಹೋಗುತ್ತಿದ್ದ ವೇಳೆ  ಮಂಗಳೂರು ಕಡೆಯಿಂದ ಬಂದ ಕೆಎಸ್​​ಆರ್​​ಟಿಸಿ ರಾಜಹಂಸ ಬಸ್ ಮುಖಾಮುಖಿ ಡಿಕ್ಕಿಯಾಗಿವೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.

Key words: Mangalore, Three death, horrific accident