ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮೂವರು ಸಾವು…

ರಾಯಚೂರು,ಅ,30,2019(www.justkannada.in): ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ರಾಯಚೂರು ತಾಲ್ಲೂಕಿನ ಗಿಲ್ಲೆಸೂಗೂರು ಬಳಿ ಈ ಘಟನೆ ನಡೆದಿದೆ. ರಾಜಶೇಖರ್(50), ಕೃಷ್ಣ(40) ಸೇರಿ ಮೂವರು ಮೃತಪಟ್ಟವರು. ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಕುರಿತು ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಿಗ್ಗೆ ತುಮಕೂರಿನ ಕೊರಟಗೆರೆಯ ಜಟ್ಟಿ ಅಗ್ರಹಾರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 6 ಮಂದಿ ಸಾವನ್ನಪ್ಪಿದ್ದರು.

Key words: Three death- raichur-car- overturns