Sunday, September 20, 2026

BDA Apartments

ನೀರನಲ್ಲಿ ಆಟವಾಡುವಾಗ ಆಯತಪ್ಪಿ ಬಿದ್ದು ಮೂವರು ದುರ್ಮರಣ BDA JK_Adv BDA Adv
Home Crime ನೀರನಲ್ಲಿ ಆಟವಾಡುವಾಗ ಆಯತಪ್ಪಿ ಬಿದ್ದು ಮೂವರು ದುರ್ಮರಣ.

ನೀರನಲ್ಲಿ ಆಟವಾಡುವಾಗ ಆಯತಪ್ಪಿ ಬಿದ್ದು ಮೂವರು ದುರ್ಮರಣ.

ಚಿಕ್ಕಮಗಳೂರು,ಮೇ,22,2023(www.justkannada.in):  ಕಾಲುವೆ ನೀರಿನಲ್ಲಿ ಆಟವಾಡುವಾಗ ಆಯತಪ್ಪಿ ಬಿದ್ದು ಮೂವರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ತರೀಕೆರೆ ತಾಲೂಕಿನ ಭದ್ರಾ ಡ್ಯಾಂ ಪಕ್ಕದ ಕಾಲುವೆಯಲ್ಲಿ ಈ ಘಟನೆ ನಡೆದಿದೆ. ರವಿ(31), ಅನನ್ಯ(17), ಶಾಮವೇಣಿ(16) ಮೃತಪಟ್ಟವರು. ರವಿ ಮೂಲತಃ ಲಕ್ಕವಳ್ಳಿ ನಿವಾಸಿ. ಅನನ್ಯ ಮತ್ತು ಶಾಮವೇಣಿ ರವಿಯ ಸಹೋದರಿಯರ ಮಕ್ಕಳು ಎನ್ನಲಾಗಿದೆ.ನೀರನಲ್ಲಿ ಆಟವಾಡುವಾಗ ಆಯತಪ್ಪಿ ಬಿದ್ದು ಮೂವರು ದುರ್ಮರಣ water death water

ರಜೆ ನಿಮಿತ್ತ ಅನನ್ಯ ಮತ್ತ ಶಾಮವೇಣಿ ಲಕ್ಕವಳ್ಳಿ ಸಂಬಂಧಿ ಮನೆಗೆ ಬಂದಿದ್ದು ನೀರಿನಲ್ಲಿ ಆಟವಾಡಲು ತೆರಳಿದ್ದಾಗ ಈ ಘಟನೆ ನಡೆದಿದೆ. ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Three- died – falling down -playing – water-chikkamagalore