Thursday, August 6, 2026

BDA Apartments

Home Crime  ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

 ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ಶಿವಮೊಗ್ಗ,ಆಗಸ್ಟ್,13,2024 (www.justkannada.in):  ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗದ ಕ್ಲಾರ್ಕ್ ಪೇಟೆಯಲ್ಲಿ ಈ ಘಟನೆ ನಡೆದಿದೆ.  ಒಂದೇ ಕುಟುಂಬದವರಾದ ಭುವನೇಶ್ವರಿ, ಮೋಹನ್ ಹಾಗೂ ದರ್ಶನ್ ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಎರಡು ದಿನಗಳ ಹಿಂದೆ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದ್ದು, ಇಂದು ಮನೆಯ ಬಾಗಿಲು ತೆರೆದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ದೊಡ್ಡಪೇಟೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.

Key words: Three members , same family, committed, suicide