ನೇಣುಬಿಗಿದುಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು.

ಚಾಮರಾಜನಗರ,ಜೂನ್,23,2023(www.justkannada.in): ನೇಣುಬಿಗಿದುಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರದ ಬೇಡರಪುರ ಗ್ರಾಮದಲ್ಲಿ ನಡೆದಿದೆ.

ಮಹದೇವಸ್ವಾಮಿ(40), ಸವಿತಾ(48), ಸಿಂಚನ(13) ಆತ್ಮಹತ್ಯೆಗೆ ಶರಣಾದವರು. ಮೂವರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ ಕುರಿತು ಪ್ರಕರಣ ದಾಖಲಾಗಿದೆ.

Key words: Three members – same family -committed -suicide -hanging -themselves.