ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು.

ಬೆಂಗಳೂರು,ಡಿಸೆಂಬರ್,20,2022(www.justkannada.in): ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಶರಣಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​​ ನಲ್ಲಿ ಈ ಘಟನೆ ನಡೆದಿದೆ.  ಯಶೋಧಾ(70), ಸುಮನ್(41), ನರೇಶ್ ಗುಪ್ತಾ(36) ಆತ್ಮಹತ್ಯೆಗೆ ಶರಣಾದವರು. ಮೇಲ್ನೋಟಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​​ನ ಮನೆಯೊಂದರಲ್ಲಿ ವಾಸವಾಗಿದ್ದ ತಾಯಿ, ಮಗಳು ಹಾಗೂ ಮಗ ಆತ್ಮಹತ್ಯೆ ಮಾಡಿಕೊಂಡಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮೃತ ತಾಯಿ ಯಶೋಧಾರಿಗೆ ಮೂವರು ಮಕ್ಕಳಿದ್ದಾರೆ. ಈ ಪೈಕಿ ಒಬ್ಬ ಮಗಳು ಮದುವೆ ಆಗಿ ರಾಜಾಜಿನಗರದಲ್ಲಿ ನೆಲೆಸಿದ್ದಾಳೆ. ಮಗ ನರೇಶ್​, ಮತ್ತೋರ್ವ ಪುತ್ರಿ ಸುಮನ್ ತಾಯಿ ಯಶೋಧಾ ಜತೆ ನೆಲೆಸಿದ್ದರು. ಆದ್ರೆ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ ನರೇಶ್ ವೃತ್ತಿಯಲ್ಲಿ ಕಾಂಟ್ರಾಕ್ಟರ್ ಆಗಿದ್ದ.

 

Key words: Three members – same family- committed- suicide.