Saturday, August 8, 2026

BDA Apartments

Home Crime ಮಳೆಯಿಂದ ಮನೆ ಗೋಡೆ ಕುಸಿದು ಮೂವರು ಸಾವು

ಮಳೆಯಿಂದ ಮನೆ ಗೋಡೆ ಕುಸಿದು ಮೂವರು ಸಾವು

ಹಾವೇರಿ, ಜುಲೈ, 19,2024 (www.justkannada.in):  ಮಳೆಯಿಂದ ಮನೆ ಗೋಡೆ ಕುಸಿದು ಮೂವರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ.

ಚೆನ್ನಮ್ಮ (30), ಅಮೂಲ್ಯ (3), ಅನನ್ಯಾ (6) ಮೃತ ಮೃತಪಟ್ಟವರು. ಮೂವರಿಗೆ ಗಂಭೀರ ಗಾಯಗಳಾಗಿದ್ದು, ಸವಣೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೃದ್ಧೆ ಯಲ್ಲಮ್ಮ, ಪುತ್ರ ಮುತ್ತು, ಸೊಸೆ ಸುನೀತಾ  ಗಾಯಗೊಂಡಿದ್ದಾರೆ.

ಇಂದು ಮುಂಜಾನೆ ಈ ಘಟನೆ ನಡೆದಿದ್ದು ಮನೆಯಲ್ಲಿ ಮಲಗಿದ್ದ ಆರು ಜನರ ಮೇಲೆ ಮಳೆಯಿಂದಾಗಿ ಗೋಡೆ ಬಿದ್ದಿದೆ. ಇದರಿಂದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಉಳಿದ ಮೂವರಿಗೆ ಗಂಭೀರ ಗಾಯಗಳಾಗಿವೆ. ಹುಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Key words: Three people, died, house wall, collapsed