Thursday, September 17, 2026

BDA Apartments

ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ BDA JK_Adv BDA Adv
Home Crime ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

ಶಿವಮೊಗ್ಗ,ನವೆಂಬರ್,14,2024 (www.justkannada.in): ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂರು ಯುವಕರು  ಶವವಾಗಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಳಸವಳ್ಳಿ ಗ್ರಾಮದ ಬಳಿ ನಡೆದಿದೆ.

ಕಳಸವಳ್ಳಿ ಗ್ರಾಮದ ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಮೂರು ಯುವಕರು ನಾಪತ್ತೆಯಾಗಿದ್ದರು. ಚೇತನ ಜೈನ್ (28) ರಾಜು (28) ಹಾಗೂ ಸಂದೀಪ್ (30) ಶವವಾಗಿ ಪತ್ತೆಯಾಗಿದ್ದಾರೆ.  ಇವರು ಹುಲಿದೇವರಬನ ನಿವಾಸಿಗಳು ಎಂದು ತಿಳಿದುಬಂದಿದೆ.

ನಿನ್ನೆ ಶರಾವತಿ ಹಿನ್ನೀರಿನಲ್ಲಿ ತೆಪ್ಪದಲ್ಲಿದ್ದಲ್ಲಿ ತೆರಳಿದ್ದ ಒಟ್ಟು ಐವರ ಪೈಕಿ ರಾಜು, ಸಂದೀಪ್ ಭಟ್ ಮತ್ತು ಚೇತನ್ ನಾಪತ್ತೆಯಾಗಿದ್ದು, ನವೀನ್ ಹಾಗೂ ಯಶ್ವಂತ್‌ ಈಜಿಕೊಂಡು ದಡ ಸೇರಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: three people, missing, found, dead body