ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು..

ವಿಜಯನಗರ,ಡಿಸೆಂಬರ್,17,2022(www.justkannada.in): ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ.

ಹೊಸಪೇಟೆ ಹೊರವಲಯದಲ್ಲಿ ಈ ಘಟನೆ ನಡೆದಿದೆ.  ಯಶವಂತ , ಅಂಜಿನಿ,  ಗುರುರಾಜ್ ಮೃತಪಟ್ಟ ವಿದ್ಯಾರ್ಥಿಗಳು. ಕಾಲುವೆಗೆ ಆರು ಮಂದಿ ವಿದ್ಯಾರ್ಥಿಗಳು ಈಜಲು ತೆರಳಿದ್ದರು. ಈ ವೇಳೆ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಹೊಸಪೇಟೆ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಪ್ರಕರಣ ದಾಖಲಾಗಿದೆ.

Key words:  three -students – water-death- vijayanagar