Sunday, August 9, 2026

BDA Apartments

Home Front Page ಸಿದ್ಧರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದು ಸರಿಯಲ್ಲ- ಮಾಜಿ ಸಿಎಂ ಬಿಎಸ್ ವೈ ಖಂಡನೆ.

ಸಿದ್ಧರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದು ಸರಿಯಲ್ಲ- ಮಾಜಿ ಸಿಎಂ ಬಿಎಸ್ ವೈ ಖಂಡನೆ.

ಬೆಂಗಳೂರು,ಆಗಸ್ಟ್,18,2022(www.justkannada.in):   ವಿಪಕ್ಷ ನಾಯಕ ಸಿದ್ಧರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದು ಸರಿಯಲ್ಲ. ಇಂತಹ ನಡೆವಳಿಕೆಯನ್ನ ಸಹಿಸಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಬಿಎಸ್ ಯಡಿಯೂರಪ್ಪ,  ಸಿದ್ಧರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿದ್ದು ಸರಿಯಲ್ಲ ಇಂಥ ಘಟನೆ ನಡೆಯಬಾರದು. ಸಿದ್ದರಾಂಯ್ಯ ವಿಪಕ್ಷ ನಾಯಕರಿ್ದ್ಧಾರೆ ಸಿದ್ದರಾಮಯ್ಯರನ್ನ ಗೌರವಯುತವಾಗಿ ನಡೆಸಿಕೊಳ್ಳಬೇಕು.  ಇಂತಹ ನಡವಳಿಕೆಯನ್ನ ಸಹಿಸಲ್ಲ ಎಂದು ಖಂಡಿಸಿದರು.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ,  ವಿಪಕ್ಷ ನಾಯಕರಿಗೆ ಭದ್ರತೆ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.  ಕೊಡಗಿನ ನೆರೆ ಹಾನಿ ವೀಕ್ಷಣೆಗೆ ತೆರಳಿದ್ಧ ವಿಪಕ್ಷ ನಾಯಕ ಸಿದ‍್ಧರಾಮಯ್ಯಗೆ  ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿತ್ತು. ಈ ಸಮಯದಲ್ಲಿ ಸಿದ್ಧರಾಮಯ್ಯ ಕಾರಿಗೆ ಮೊಟೆ ಎಸೆಯಲಾಗಿತ್ತು.

Key words: Throwing -eggs –Siddaramaiah- car -not right – BSY