ರಾಜ್ಯದ ವಿವಿಧೆಡೆ ಇಂದು ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು, ಏಪ್ರಿಲ್ 30, 2023 (www.justkannada.in): ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಗುಡುಗು ಸಿಡಿಲು ಸಹಿತ ಭರ್ಜರಿ ಮಳೆಯಾಗಲಿದೆ.

ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ಮೈಸೂರು, ಮಂಡ್ಯ, ತುಮಕೂರು, ಕೊಡಗು, ದಾವಣಗೆರೆ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ.

ಗಾಳಿಯೊಂದಿಗೆ ಮಳೆಯಾಗುವ ಹಿನ್ನೆಲೆಯಲ್ಲಿ ವಿದ್ಯುತ್​ ಪೂರೈಕೆಯಲ್ಲಿ ವ್ಯತ್ಯಾಸ, ಮರಗಳು ಉರುಳಿ ಬೀಳುವ ಸಾಧ್ಯತೆ ಇದೇ ಎಂದು ಹವಾಮಾನ ಇಲಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.