Sunday, August 23, 2026

BDA Apartments

Home Crime ಚಾಮರಾಜನಗರ ಜಿಲ್ಲೆಯಲ್ಲಿ ರೈತರ ಮೇಲೆ ದಾಳಿ ನಡೆಸಿದ್ದ ಹುಲಿ ಸೆರೆ

ಚಾಮರಾಜನಗರ ಜಿಲ್ಲೆಯಲ್ಲಿ ರೈತರ ಮೇಲೆ ದಾಳಿ ನಡೆಸಿದ್ದ ಹುಲಿ ಸೆರೆ

ಚಾಮರಾಜನಗರ, ಜುಲೈ 03, 2022 (www.justkannada.in): ಚಾಮರಾಜನಗರದಲ್ಲಿ ರೈತರ ಮೇಲೆ ದಾಳಿ ನಡೆಸಿದ್ದ ಹುಲಿ ಕೊನೆಗೂ ಸೆರೆ ಸಿಕ್ಕಿದೆ.

ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಹುಲಿಯನ್ನು ಸೆರೆ ಹಿಡಿಯಲಾಗಿದೆ. ಇದು ಬಾಳೆ ತೋಟದಲ್ಲಿ ಅಡಗಿ ಕುಳಿತಿತ್ತು.

ಬಂಡೀಪುರ ವ್ಯಾಪ್ತಿಯ ಗೋಪಾಲಪುರದಲ್ಲಿ ನಿನ್ನೆ 2 ಹಸು ಕೊಂದು ಇಬ್ಬರು ರೈತರ ಮೇಲೆ ಈ ಹುಲಿ ದಾಳಿ  ನಡೆಸಿತ್ತು.

ಹುಲಿಗೆ  ಅರವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಈ ನಡುವೆ ಕಾರ್ಯಾಚರಣೆಗೆ ಮಳೆ ಅಡ್ಡಿಯಾಗಿತ್ತು. ದಸರಾ ಆನೆ ಅಭಿಮನ್ಯು ಹಾಗೂ ಶ್ರೀಕಂಠನನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸಲಾಗಿತ್ತು.

ಬಾಳೆ ತೋಟದಲ್ಲಿ ಅಡಗಿದ್ದ  ಹುಲಿಗೆ  ಮೂರು ಬಾರಿ ಅರವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಮಳೆ ನಡುವೆ ಯಶಸ್ವಿ ಕಾರ್ಯಾಚರಣೆ ನಡೆಸಲಾಗಿದೆ. ಗಾಯಗೊಂಡಿರುವ ಹುಲಿಯನ್ನು ಚಿಕಿತ್ಸೆಗೆ ಮೈಸೂರಿಗೆ ರವಾನಿಸಲಾಗಿದೆ.ಅ