Sunday, August 9, 2026

BDA Apartments

Home Front Page ಕಾರ್ತೀಕ ಮಾಸ ಮುಗಿಯುವವರೆಗೂ ಮಳೆ ಆರ್ಭಟ: ಕೋಡಿಮಠದ ಶ್ರೀಗಳ ಭವಿಷ್ಯ

ಕಾರ್ತೀಕ ಮಾಸ ಮುಗಿಯುವವರೆಗೂ ಮಳೆ ಆರ್ಭಟ: ಕೋಡಿಮಠದ ಶ್ರೀಗಳ ಭವಿಷ್ಯ

ಮೈಸೂರು, ಅಕ್ಟೋಬರ್ 21, 2021 (www.justkannada.in): ಕಾರ್ತೀಕ ಮಾಸ ಮುಗಿಯುವವರೆಗೂ ಮಳೆ ಆರ್ಭಟ, ಅನಾಹುತ ನಿಲ್ಲುವುದಿಲ್ಲ ಎಂದು ಕೋಡಿಮಠದ ಶ್ರೀಗಳು ನುಡಿದ ಭವಿಷ್ಯ ನುಡಿದ್ದಾರೆ.

ರಾಜ್ಯದಲ್ಲಿ ಇನ್ನೂ ಮಳೆ ಕಾಟ ಇದೆ. ಇಷ್ಟಕ್ಕೆ ನಿಲ್ಲಲ್ಲ. ಕಾರ್ತಿಕ ಮಾಸ ಮುಗಿಯುವವರೆಗೆ ಮಳೆ ನಿಲ್ಲುವುದಿಲ್ಲ. ಮಳೆ ಇನ್ನೂ ಹೆಚ್ಚಳವಾಗುವ ಲಕ್ಷಣ ಇದೆ ಎಂದು ಶ್ರೀಗಳು ಎಚ್ಚರಿಸಿದ್ದಾರೆ.

ಕಾರ್ತಿಕ ಮಾಸ ಕಳೆಯುವವರೆಗೂ ಮಳೆ ಇರುತ್ತದೆ. ಸದ್ಯ ಪ್ರಕೃತಿ ವಿಕೋಪವಾಗಿದೆ. ಏನೂ ಮಾಡಲು ಆಗುವುದಿಲ್ಲ ಎಂದಿದ್ದಾರೆ ಎಂದು ಹೇಳುವ ಮೂಲಕ ಎಷ್ಟು ದಿನಗಳ ಕಾಲ ಈ ಮಳೆ ಕಾಟ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

ರಾಜ್ಯಾದ್ಯಂತ ಮಳೆಯಿಂದಾಗಿ ಹಲವೆಡೆ ರೈತರ ಬೆಳೆಗಳು, ರಸ್ತೆ, ಮನೆಗಳು ಸಂಪೂರ್ಣ ಹಾನಿಯಾಗಿದ್ದು, ಅಪಾರ ಪ್ರಮಾಣ ನಷ್ಟ ಉಂಟಾಗಿದೆ. ಮಳೆ ಸೃಷ್ಟಿಸಿದ ಅವಾಂತರಕ್ಕೆ ಜನರು ಪ್ರಾಣ ಕಳೆದುಕೊಂಡಿದ್ದಾರೆ.