ಟಿಂಬರ್ ಗೋದಾಮಿಗೆ ಬೆಂಕಿ ತಗುಲಿ 11 ಮಂದಿ ಕಾರ್ಮಿಕರು ಸಜೀವ ದಹನ.

ಹೈದರಾಬಾದ್,ಮಾರ್ಚ್,23,2022(www.justkannada.in): ಟಿಂಬರ್ ಯಾರ್ಡ್ ಗೋದಾಮಿಗೆ ಬೆಂಕಿ ತಗುಲಿ 11 ಮಂದಿ ಕಾರ್ಮಿಕರು ಸಜೀವ ದಹನವಾಗಿರುವ ಘಟನೆ  ಹೈದರಾಬಾದ್‌ ನ ಭೋಯಿಗುಡಾದಲ್ಲಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಟಿಂಬರ್ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 12 ಮಂದಿ ಕಾರ್ಮಿಕರ ಪೈಕಿ 11 ಕಾರ್ಮಿಕರು ಸಜೀವ ದಹನವಾಗಿದ್ದಾರೆಂದು ತಿಳಿದುಬಂದಿದೆ. ಮೃತ ಕಾರ್ಮಿಕರೆಲ್ಲರೂ ಬಿಹಾರ ಮೂಲದವರಾಗಿದ್ದು, ಇಲ್ಲಿನ ಜಂಕ್ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.myosre- Fire -short circuit-burning - cow

ಮುಂಜಾನೆ 3.30ರ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.  ಬೆಳ್ಳಂಬೆಳಗ್ಗೆ ಸಿಕಂದರಾಬಾದ್​ನಲ್ಲಿ ಟಿಂಬರ್​​ ಡಿಪೋದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸುದ್ದಿ ತಿಳಿದ ತಕ್ಷಣವೇ ಅಗ್ನಿ ಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾರಂಭಿಸಿತು. ಆದರೆ ಅಷ್ಟರಲ್ಲಿ 11 ಜನರು ಸಜೀವ ದಹನಗೊಂಡಿದ್ದರು. ಓರ್ವ ವ್ಯಕ್ತಿಯನ್ನು ರಕ್ಷಿಸಲಾಗಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.

Key words: Timber –fire-11 workers- death