Friday, September 11, 2026

BDA Apartments

Home Front Page ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಿಪಟೂರು ಬಂದ್.

ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಿಪಟೂರು ಬಂದ್.

ತುಮಕೂರು,ಡಿಸೆಂಬರ್,14,2022(www.justkannada.in): ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತುಮಕೂರು ಜಿಲ್ಲೆ ತಿಪಟೂರು ಬಂದ್ ಗೆ ಕರೆ ನೀಡಲಾಗಿದೆ.

ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಕ್ಷೇತ್ರ ತಿಪಟೂರು ಬಂದ್ ಗೆ ಕರೆ ನೀಡಲಾಗಿದ್ದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಬಂದ್ ಶಾಂತಿಯುತವಾಗಿ ನಡೆಯುತ್ತಿದೆ. ತಿಪಟೂರು ಹೋರಾಟ ಸಮಿತಿಯ ನೇತೃತ್ವದಲ್ಲಿ ಬಂದ್ ಮಾಡಲಾಗಿದೆ.

ಮುಖ್ಯವಾಗಿ ಕೊಬ್ಬರಿ ಬೆಳೆಗೆ ಬೆಂಬಲ ಬೆಲೆ ಘೋಷಿಸುವಂತೆ ಒತ್ತಾಯಿಸಲಾಗಿದೆ.  ತಿಪಟೂರಿನಲ್ಲಿ ಅಂಗಡಿ ಮುಂಗಟ್ಟು ಬಂದ್ ಆಗಿವೆ.  ಬಂದ್ ಗೆ ವ್ಯಾಪಾರಿಗಳು ಸಂಘಸಂಸ್ಥೆಗಳು ಶಿಕ್ಷಣ ಸಂಸ್ಥೆಗಳು,  ಆಟೋಚಾಲಕರು,  ಹೋಟಲ್ ಮಾಲೀಕರು ಬೆಂಬಲ ನೀಡಿದ್ದಾರೆ.

Key words: Tipatur -bandh –demanding- fulfillment – various demands – farmers.