ಕಾರಿಗೆ ಟಿಪ್ಪರ್ ಲಾರಿ ಡಿಕ್ಕಿ: ಸ್ಥಳದಲ್ಲೇ ಮೂವರು ಸಾವು….

ಬಳ್ಳಾರಿ,ಫೆ,3,2020(www.justkannada.in): ಕಾರಿಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ಬೋರಹಟ್ಟಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಘಟನೆ ನಡೆದಿದೆ. ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸೇರಿ ದಂಪತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಅದೃಷ್ಟವಶಾತ್ ಮಗು ಪ್ರಾಣಾಪಾಯದಿಂದ ಪಾರಾಗಿದೆ.

ಮಡಿಕೇರಿಯಿಂದ ಇಳಕಲ್ ಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೇ ಲಾರಿ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದ್ದು ಮೃತಪಟ್ಟವರು ಇಳಕಲ್ ಮೂಲದವರು ಎನ್ನಲಾಗಿದೆ. ಪ್ರಾಣಾಪಾಯದಿಂದ ಪಾರಾದ ಮಗುವನ್ನ ಕೂಡ್ಲಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Key words: Tipper- lorry -collides – car-three death