Saturday, October 3, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ಟಿಪ್ಪು ಜಯಂತಿ ಆಚರಣೆಗೆ ಜಾಗ ನಿರಾಕರಣೆ ಹಿನ್ನೆಲೆ: ಶಾಸಕ ತನ್ವೀರ್ ಸೇಠ್ ನೇತೃತ್ವದಲ್ಲಿ ಪ್ರತಿಭಟನೆ.

ಟಿಪ್ಪು ಜಯಂತಿ ಆಚರಣೆಗೆ ಜಾಗ ನಿರಾಕರಣೆ ಹಿನ್ನೆಲೆ: ಶಾಸಕ ತನ್ವೀರ್ ಸೇಠ್ ನೇತೃತ್ವದಲ್ಲಿ ಪ್ರತಿಭಟನೆ.

ಮೈಸೂರು,ನ,6,2019(www.justkannada.in): ಮೈಸೂರಿನಲ್ಲಿ ಟಿಪ್ಪು ಜಯಂತಿ ಆಚರಣೆಗೆ ಜಾಗ ನಿರಾಕರಣೆ  ಮಾಡಿದ ಹಿನ್ನೆಲೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ನಗರದ ಮೂಡ ಕಚೇರಿ ಎದುರು ಶಾಸಕ ತನ್ವೀರ್ ಸೇಠ್ ನೇತೃತ್ವದಲ್ಲಿ ಟಿಪ್ಪು ಅಭಿಮಾನಿಗಳು ಪ್ರತಿಭಟನೆ ನಡೆಸಿದರು. ಖಾಸಗಿಯಾಗಿ ಟಿಪ್ಪು ಜಯಂತಿ ಆಚರಣೆ ಮಾಡಲು ಅನುಮತಿ ಕೋರಿದ್ರು. ಬನ್ನಿಮಂಟಪದ ಕವಾಯತು ಮೈದಾನದಲ್ಲಿ ಜಯಂತಿ ಆಚರಣೆಗೆ ಅನುಮತಿ ಕೋರಲಾಗಿತ್ತು.

ಆದ್ರೆ ಅಲ್ಲಿ ಟಿಪ್ಪು ಜಯಂತಿ ಆಚರಣೆಗೆ ಅಧಿಕಾರಿಗಳು ಅದಕ್ಕೆ ಅನುಮತಿ ನಿರಾಕರಿಸಿದ್ದು ಈ ಹಿನ್ನೆಲೆ ದಿಢೀರ್ ಪ್ರತಿಭಟನೆ ನಡೆಸಿದರು. ಜಿಲ್ಲಾ ಧಿಕಾರಿ ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು.

Key words: Tipu Jayanti- celebration- Protest – MLA Tanveer Seth-mysore