ಇಂದು ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿ.

ನವದೆಹಲಿ ಅಕ್ಟೋಬರ್,14,2022(www.justkannada.in): ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್  ಮತ್ತು ಹಿಮಾಚಲ ಪ್ರದೇಶ ರಾಜ್ಯಗಳ  ವಿಧಾನಸಭಾ ಚುನಾವಣೆಗೆ ಇಂದು  ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಲಿದೆ.

ಹಿಮಾಚಲ ಪ್ರದೇಶದ 68 ಮತ್ತು ಗುಜರಾತ್ ನ 182 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆಯ ನಡೆಯಲಿದ್ದು ಇಂದು ಮಧ್ಯಾಹ್ನ 3 ಗಂಟೆಗೆ ಚುನಾವಣಾ ದಿನಾಂಕ ಪ್ರಕಟವಾಗಲಿದೆ.

ಲೋಕಸಭೆ ಚುನಾವಣೆ ಮತ್ತು ದೇಶದ ವಿವಿಧ ರಾಜ್ಯಗಳಲ್ಲಿ ನಡೆಯುವ ಚುನಾವಣೆಗಳ ಮೇಲೆ ಈ ಎರಡೂ ರಾಜ್ಯಗಳ ಚುನಾವಣಾ ಫಲಿತಾಂಶ ಪರಿಣಾಮ ಬೀರುವ ನಿರೀಕ್ಷೆಯಿದೆ. ಹೀಗಾಗಿ ಎಲ್ಲ ರಾಜಕೀಯ ಪಕ್ಷಗಳೂ ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿವೆ.

Key words: Today – date – announce-two states—assembly- elections