ಇಂದು ಕೆಎಂಎಫ್ ಅಧ್ಯಕ್ಷ  ಸ್ಥಾನಕ್ಕೆ ಚುನಾವಣೆ: ನಾನು ಅವಿರೋಧವಾಗಿ ಆಯ್ಕೆಯಾಗುವ ವಿಶ್ವಾಸವಿದೆ- ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು, ಆ.31,2019(www.justkannada.in):  ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದ್ದು, ಕೆಎಂಎಫ್ ಅಧ್ಯಕ್ಷನಾಗಿ ಅವಿರೋಧವಾಗಿ ಆಯ್ಕೆಯಾಗುವ ವಿಶ್ವಾಸವಿದೆ ಎಂದು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂದು ಕೆಎಂಎಫ್ ಅಧ್ಯಕ್ಷಗಾದಿಗೆ ಚುನಾವಣೆ ನಡೆಯಲಿದ್ದು ಮಧ್ಯಾಹ್ನ 1 ಗಂಟೆವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಮಧ್ಯಾಹ್ನ 1.45ಕ್ಕೆ ಮತದಾನ ನಡೆಯಲಿದ್ದು 2 ಗಂಟೆಗೆ ಫಲಿತಾಂಶ ಬರಲಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ, ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ನಾಮಪತ್ರ ಸಲ್ಲಿಸುತ್ತೇನೆ.  ನನಗೆ ಕೆಎಂಎಫ್ ನ 13 ನಿರ್ದೇಶಕರ ಬೆಂಬಲವಿದೆ. ಹೀಗಾಗಿ ನಾನು ಅಧ್ಯಕ್ಷನಾಗಿ ಅವಿರೋಧವಾಗಿ ಆಯ್ಜೆಯಾಗುವ ವಿಶ್ವಾಸವಿದೆ. ಹೆಚ್.ಡಿ ರೇವಣ್ಣ ಮತ್ತು ಭೀಮಾನಾಯ್ಕ್ ಸಹಕಾರ ಕೋರುತ್ತೇನೆ ಎಂದು ತಿಳಿಸಿದರು.

 

ಈ ನಡುವೆ ಕೆಎಂಎಫ್ ಅಧ್ಯಕ್ಷ ಸ್ಥಾನದ ಮೇಲೆ ಮತ್ತೆ ಕಣ್ಣಿಟ್ಟಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ ಇಷ್ಟೆಲ್ಲ ಬೆಳವಣಿಗೆಗಳ ಮಧ್ಯೆ ಬೆಂಗಳೂರಿಗೆ ಆಗಮಿಸಿಯೇ ಇಲ್ಲ ಎಂದು ತಿಳಿದುಬಂದಿದೆ.

Key words: Today -election – KMF –president-unanimously  – MLA- Balachandra Zarakiholi