ಇಂದು ಭಾರತ- ದಕ್ಷಿಣ ಆಫ್ರಿಕಾ 2ನೇ ಏಕದಿನ ಪಂದ್ಯ

ಬೆಂಗಳೂರು, ಅಕ್ಟೋಬರ್ 9, 2022 (www.justkannada.in): ದಕ್ಷಿಣ ಆಫ್ರಿಕಾ ವಿರುದ್ಧದ ಪ್ರಥಮ ಏಕದಿನ ಪಂದ್ಯದಲ್ಲಿ ಸೋಲು ಕಂಡ ಭಾರತ ತಂಡ ಇದೀಗ ದ್ವಿತೀಯ ಕದನಕ್ಕೆ ಸಜ್ಜಾಗುತ್ತಿದೆ.

ಇಂದು ರಾಂಚಿಯ ಜೆಎಸ್​ಸಿಎ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಭಾರತ ಆಫ್ರಿಕಾ ನಡುವೆ ಎರಡನೇ ಏಕದಿನ ಪಂದ್ಯ ನಡೆಯಲಿದೆ.

ಮೊದಲ ಏಕದಿನದಲ್ಲಿ ಗೆಲುವಿನ ಅಂಚಿಗೆ ಬಂದು ಸೋಲುಂಡಿದ್ದ ಭಾರತ ಇದೀಗ ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ.

ಇದೀಗ ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ಧವನ್ ಪಡೆಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ. ಹೆಚ್ಚು ಯುವ ಆಟಗಾರರಿಂದಲೇ ಕೂಡಿರುವ ಟೀಮ್ ಇಂಡಿಯಾಕ್ಕೆ ಇದೊಂದು ಅಗ್ನಿಪರೀಕ್ಷೆಯಾಗಿದೆ.

ಅಂದಹಾಗೆ ಶನಿವಾರದಿಂದ ರಾಂಚಿಯಲ್ಲಿ ಮಳೆಯಾಗುತ್ತಿದೆ. ಅಷ್ಟೇ ಅಲ್ಲ, ಭಾನುವಾರವೂ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.