Sunday, August 23, 2026

BDA Apartments

Home Front Page ಇಂದು ಭಾರತ- ದಕ್ಷಿಣ ಆಫ್ರಿಕಾ ಮೂರನೇ ಏಕದಿನ ಪಂದ್ಯ

ಇಂದು ಭಾರತ- ದಕ್ಷಿಣ ಆಫ್ರಿಕಾ ಮೂರನೇ ಏಕದಿನ ಪಂದ್ಯ

ಬೆಂಗಳೂರು, ಅಕ್ಟೋಬರ್ 11, 2022 (www.justkannada.in): ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ  ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಏಕದಿನ ಪಂದ್ಯ ಮಂಗಳವಾರ ನಡೆಯಲಿದೆ.

ಇಲ್ಲಿ ಗೆಲ್ಲುವ ತಂಡ ಸರಣಿ ಗೆದ್ದು ಟ್ರೋಫಿಗೆ ಮುತ್ತಿಕ್ಕಲಿದೆ. ಹೀಗಾಗಿ ಸರಣಿ ವಶಪಡಿಸಿಕೊಳ್ಳಲು ಎರಡು ತಂಡಗಳಿಗೂ ಮಾಡು ಇಲ್ಲವೇ ಮಡಿಯಾಗಿದೆ. ಮೊದಲ ಏಕದಿನ ಪಂದ್ಯದಲ್ಲಿ ಶಿಖರ್ ಧವನ್ ನೇತೃತ್ವ ಟೀಂ ಇಂಡಿಯಾ, ಸೋಲು ಕಂಡಿತ್ತು. ರಾಂಚಿಯಲ್ಲಿ ನಡೆಡಿದ್ದ ದ್ವಿತೀಯ ಏಕದಿನ ಪಂದ್ಯದಲ್ಲಿ ಭಾರತ ಭರ್ಜರಿ ಜಯ ಸಾಧಿಸಿತ್ತು.

ಇಂದಿನ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಹೆಚ್ಚಿದೆ. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಇದರಿಂದಾಗಿ ಪಂದ್ಯ ನಡೆಯುವುದರ ಬಗ್ಗೆ ಅನುಮಾನ ಹುಟ್ಟಿಕೊಂಡಿದೆ.