ಇಂದು ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಶ್ ರಿಂದ ಕೃತಜ್ಞತಾ ಸಮಾವೇಶ: ಫ್ಲೆಕ್ಸ್ ನಲ್ಲಿ ರಾರಾಜಿಸುತ್ತಿರುವ ‘ಕೈ’ ನಾಯಕರ ಫೋಟೊಗಳು…

ಮಂಡ್ಯ,ಮೇ,29,2019(www.justkannada.in):  ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿರುವ ಸುಮಲತಾ ಅಂಬರೀಶ್ ಇಂದು ಮಂಡ್ಯ ಜನತೆಗೆ ಕೃತಜ್ಞತೆ ಸಲ್ಲಿಸಲು ಸಮಾವೇಶ ಆಯೋಜನೆ ಮಾಡಿದ್ದಾರೆ.

ಮಂಡ್ಯದ ಸಿಲ್ವರ್ ಜ್ಯುಬಿಲಿ ಪಾರ್ಕ್ ನಲ್ಲಿ ಈ ಸಮಾವೇಶ ನಡೆಯಲಿದ್ದು, ಸಮಾವೇಶದಲ್ಲಿ ಸಿನಿನಾಯಕರು ಸೇರಿ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಸಮಾವೇಶ ಆರಂಭವಾಗಲಿದ್ದು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರುವ ನಿರೀಕ್ಷೆ ಇದೆ.

ಸುಮಲತಾ ಅಂಬರೀಶ್ ಅವರು ಕಾಳಿಕಾಂಬ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ನಂತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಇನ್ನು ಇಂದು ಸಮಾವೇಶದಲ್ಲಿ ಬಿಜೆಪಿಗೆ ಬೆಂಬಲ ನೀಡುವ ಬಗ್ಗೆ ನಿರ್ಧರಿಸಲಿದ್ದಾರೆ.

ಫ್ಲೆಕ್ಸ್ ನಲ್ಲಿ ಕಾಂಗ್ರೆಸ್ ನಾಯಕರ ಫೋಟೊಗಳು…

ಮಂಡ್ಯದಲ್ಲಿ ಕಾಂಗ್ರೆಸ್ -ಜೆಡಿಎಸ್ ಮೈತ್ರಿ  ಮೈತ್ರಿ ಅಭ್ಯರ್ಥಿಯಾಗಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಿದರೂ ಕೆಲ ಕಾಂಗ್ರೆಸ್ ಮುಖಂಡರು ಸುಮಲತಾ ಅಂಬರೀಶ್ ಪರ ಕೆಲಸ ಮಾಡಿದ್ದಾರೆ ಎಂಬ ಆರೋಪವಿದೆ. ಇದಕ್ಕೆ ಪುಷ್ಟಿ ನೀಡುವಂತೆ ಇಂದು ಸಮಾವೇಶಕ್ಕೆ ಹಾಕಿರುವ ಫ್ಲೆಕ್ಸ್ ನಲ್ಲಿ ಕಾಂಗ್ರೆಸ್ ನಾಯಕರ ಫೋಟೊ ರಾರಾಜಿಸುತ್ತಿವೆ. ಫ್ಲೆಕ್ಸ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್ ಚಲುವರಾಯಸ್ವಾಮಿ, ರಿಜ್ವಾನ್ ಅರ್ಷಾದ್ ಫೋಟೊಗಳು ಕಾಣಿಸಿಕೊಂಡಿದ್ದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

Key words: Today is a convention organized by Sumalata in Mandya.

#mandya #sumalathaambarish #convention