Sunday, September 13, 2026

BDA Apartments

ಇಂದು ಭಾರತ-ವೆಸ್ಟ್ ಇಂಡೀಸ್ ಮೂರನೇ ಟಿ-20 ಪಂದ್ಯ BDA JK_Adv BDA Adv
Home Front Page ಇಂದು ಭಾರತ-ವೆಸ್ಟ್ ಇಂಡೀಸ್ ಮೂರನೇ ಟಿ-20 ಪಂದ್ಯ

ಇಂದು ಭಾರತ-ವೆಸ್ಟ್ ಇಂಡೀಸ್ ಮೂರನೇ ಟಿ-20 ಪಂದ್ಯ

ಬೆಂಗಳೂರು, ಆಗಸ್ಟ್ 02, 2022 (www.justkannada.in): ಇಂದು ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವೆ ಮೂರನೇ ಟಿ-20 ಪಂದ್ಯ ನಡೆಯಲಿದೆ.

ಇಂದು ಟೀಮ್ ಇಂಡಿಯಾ ಈ ಎರಡು ಬದಲಾವಣೆಯೊಂದಿಗೆ ವೆಸ್ಟ್ ಇಂಡೀಸ್ ತಂಡವನ್ನು ಮೂರನೇ ಪಂದ್ಯದಲ್ಲಿ ಎದುರಿಸಲಿದೆ.

ಸೇಂಟ್ ಕಿಟ್ಸ್​ನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ. ಟೀಮ್ ಇಂಡಿಯಾ ಮೊದಲ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾವನ್ನು 2ನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು ಹೀನಾಯವಾಗಿ ಸೋಲಿಸಿದೆ.

ಇಂದು ನಡೆಯುವ ಮೂರನೇ ಪಂದ್ಯ ಎರಡೂ ತಂಡಗಳಿಗೆ ಪ್ರಮುಖವಾಗಿದ್ದು, ಗೆದ್ದ ತಂಡ ಸರಣಿ ಗಳಿಸಲಿದೆ.

ಮೈದಾನದಲ್ಲಿ 3ನೇ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ಜಯಿಸುವ ಮತ್ತೆ ಗೆಲುವಿನ ಲಯಕ್ಕೆ ಮರಳುವ ಇರಾದೆಯಲ್ಲಿದೆ ರೋಹಿತ್ ಶರ್ಮಾ ಪಡೆ. ಇದಕ್ಕಾಗಿ ಟೀಮ್ ಇಂಡಿಯಾದಲ್ಲಿ 2 ಪ್ರಮುಖ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.