Friday, September 25, 2026

BDA Apartments

Home Front Page ಇಂದು ವರ್ಷದ ಕೊನೆಯ ಸೂರ್ಯಗ್ರಹಣ: ಹಲವು ದೇವಾಲಯಗಳು ಬಂದ್.

ಇಂದು ವರ್ಷದ ಕೊನೆಯ ಸೂರ್ಯಗ್ರಹಣ: ಹಲವು ದೇವಾಲಯಗಳು ಬಂದ್.

ನವದೆಹಲಿ, ಅಕ್ಟೋಬರ್, 25,2022(www.justkannada.in):  ದೀಪಾವಳಿ ಹಬ್ಬದ ನಡುವೆಯೇ ಇಂದು ಈ ವರ್ಷದ ಕೊನೆಯ ಸೂರ್ಯಗ್ರಹಣ ಸಂಭವಿಸಲಿದೆ. ದೀಪಾವಳಿ ಅಮಾವಾಸ್ಯೆಯಂದೇ ಸೂರ್ಯಗ್ರಹಣ ಸಂಭವಿಸುತ್ತಿದ್ದು ರಾಜ್ಯದ ಹಲವು ದೇವಸ್ಥಾನಗಳಲ್ಲಿ ಇಂದು ಮಧ್ಯಾಹ್ನದ ನಂತರ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಬರೋಬ್ಬರಿ 27 ವರ್ಷಗಳ ಬಳಿಕ ಇದೀಗ ಕೇತುಗ್ರಸ್ತ ಸೂರ್ಯಗ್ರಹಣ ಸಂಭವಿಸುತ್ತಿದ್ದು. ಈ ಗ್ರಹಣ ಭಾರತದ ಹಲವು ಭಾಗಗಳಲ್ಲಿಯೂ ಗೋಚರವಾಗಲಿದೆ. ಬೆಂಗಳೂರು, ದೆಹಲಿ, ಕೊಲ್ಕತ್ತಾ, ಚೆನ್ನೈ, ವಾರಾಣಸಿ, ಮಥುರಾದಲ್ಲಿ ಈ ಗ್ರಹಣವನ್ನ ನೋಡಬಹುದು.

ಸೂರ್ಯಗ್ರಹಣ ಇಂದು ಸಂಜೆ 4.29ಕ್ಕೆ ಪ್ರಾರಂಭವಾಗಿ ಸಂಜೆ 5.42ಕ್ಕೆ ಕೊನೆಗೊಳ್ಳುತ್ತದೆ. ಭಾರತವಲ್ಲದೆ, ಯುರೋಪ್, ಆಫ್ರಿಕಾ ಖಂಡದ ಈಶಾನ್ಯ ಭಾಗ, ಏಷ್ಯಾದ ನೈಋತ್ಯ ಭಾಗ ಮತ್ತು ಅಟ್ಲಾಂಟಿಕ್‌ನಲ್ಲಿಯೂ ಇದನ್ನು ಕಾಣಬಹುದು.ಇಂದು ವರ್ಷದ ಕೊನೆಯ ಸೂರ್ಯಗ್ರಹಣ: ಹಲವು ದೇವಾಲಯಗಳು ಬಂದ್ solar

ಸೂತಕದ ಅವಧಿಯು ಸೂರ್ಯಗ್ರಹಣಕ್ಕೆ 12 ಗಂಟೆಗಳ ಮೊದಲು ಪ್ರಾರಂಭವಾಗುತ್ತದೆ. ಗ್ರಹಣ ಮುಗಿದ ನಂತರ ಸೂತಕ ಕೊನೆಗೊಳ್ಳುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಸೂತಕದ ಅವಧಿಯಲ್ಲಿ ಯಾವುದೇ ಮಂಗಳಕರ ಅಥವಾ ಶುಭ ಕಾರ್ಯಗಳನ್ನು ಮಾಡುವುದಿಲ್ಲ. ವಿಶೇಷವಾಗಿ ಗರ್ಭಿಣಿಯರು ಈ ಸಮಯದಲ್ಲಿ ಹಲವಾರು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಏಕೆಂದರೆ ಇದು ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತಿದೆ. ಸೂರ್ಯಗ್ರಹಣ ಹಿನ್ನೆಲೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಬಹುತೇಕ ದೇವಾಲಯಗಳು ಬಂದ್ ಆಗಲಿವೆ.

Key words: Today – last -solar eclipse – year