ಇಂದು ವರ್ಷದ ಕೊನೆಯ ಸೂರ್ಯಗ್ರಹಣ: ಹಲವು ದೇವಾಲಯಗಳು ಬಂದ್.

ನವದೆಹಲಿ, ಅಕ್ಟೋಬರ್, 25,2022(www.justkannada.in):  ದೀಪಾವಳಿ ಹಬ್ಬದ ನಡುವೆಯೇ ಇಂದು ಈ ವರ್ಷದ ಕೊನೆಯ ಸೂರ್ಯಗ್ರಹಣ ಸಂಭವಿಸಲಿದೆ. ದೀಪಾವಳಿ ಅಮಾವಾಸ್ಯೆಯಂದೇ ಸೂರ್ಯಗ್ರಹಣ ಸಂಭವಿಸುತ್ತಿದ್ದು ರಾಜ್ಯದ ಹಲವು ದೇವಸ್ಥಾನಗಳಲ್ಲಿ ಇಂದು ಮಧ್ಯಾಹ್ನದ ನಂತರ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಬರೋಬ್ಬರಿ 27 ವರ್ಷಗಳ ಬಳಿಕ ಇದೀಗ ಕೇತುಗ್ರಸ್ತ ಸೂರ್ಯಗ್ರಹಣ ಸಂಭವಿಸುತ್ತಿದ್ದು. ಈ ಗ್ರಹಣ ಭಾರತದ ಹಲವು ಭಾಗಗಳಲ್ಲಿಯೂ ಗೋಚರವಾಗಲಿದೆ. ಬೆಂಗಳೂರು, ದೆಹಲಿ, ಕೊಲ್ಕತ್ತಾ, ಚೆನ್ನೈ, ವಾರಾಣಸಿ, ಮಥುರಾದಲ್ಲಿ ಈ ಗ್ರಹಣವನ್ನ ನೋಡಬಹುದು.

ಸೂರ್ಯಗ್ರಹಣ ಇಂದು ಸಂಜೆ 4.29ಕ್ಕೆ ಪ್ರಾರಂಭವಾಗಿ ಸಂಜೆ 5.42ಕ್ಕೆ ಕೊನೆಗೊಳ್ಳುತ್ತದೆ. ಭಾರತವಲ್ಲದೆ, ಯುರೋಪ್, ಆಫ್ರಿಕಾ ಖಂಡದ ಈಶಾನ್ಯ ಭಾಗ, ಏಷ್ಯಾದ ನೈಋತ್ಯ ಭಾಗ ಮತ್ತು ಅಟ್ಲಾಂಟಿಕ್‌ನಲ್ಲಿಯೂ ಇದನ್ನು ಕಾಣಬಹುದು.

ಸೂತಕದ ಅವಧಿಯು ಸೂರ್ಯಗ್ರಹಣಕ್ಕೆ 12 ಗಂಟೆಗಳ ಮೊದಲು ಪ್ರಾರಂಭವಾಗುತ್ತದೆ. ಗ್ರಹಣ ಮುಗಿದ ನಂತರ ಸೂತಕ ಕೊನೆಗೊಳ್ಳುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಸೂತಕದ ಅವಧಿಯಲ್ಲಿ ಯಾವುದೇ ಮಂಗಳಕರ ಅಥವಾ ಶುಭ ಕಾರ್ಯಗಳನ್ನು ಮಾಡುವುದಿಲ್ಲ. ವಿಶೇಷವಾಗಿ ಗರ್ಭಿಣಿಯರು ಈ ಸಮಯದಲ್ಲಿ ಹಲವಾರು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಏಕೆಂದರೆ ಇದು ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತಿದೆ. ಸೂರ್ಯಗ್ರಹಣ ಹಿನ್ನೆಲೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಬಹುತೇಕ ದೇವಾಲಯಗಳು ಬಂದ್ ಆಗಲಿವೆ.

Key words: Today – last -solar eclipse – year