ಇಂದು ನೂತನ ವರ್ಷಾರಂಭ: ತಾಯಿ ಚಾಮುಂಡೇಶ್ವರಿ ಸನ್ನಿಧಿಗೆ ಹರಿದು ಬಂದ ಭಕ್ತ ಸಾಗರ.

ಮೈಸೂರು,ಜನವರಿ,1,2021(www.justkannada.in): ಇಂದು ನೂತನ ವರ್ಷಾರಂಭ ಹಿನ್ನೆಲೆ, ಮೈಸೂರಿನ ಪ್ರವಾಸಿತಾಣಗಳತ್ತ ಪ್ರವಾಸಿಗರು ಲಗ್ಗೆ ಇಡುತ್ತಿದ್ದು, ಚಾಮುಂಡಿಬೆಟ್ಟಕ್ಕೆ ಜನ ಸಾಗರವೇ ಹರಿದು ಬಂದಿದೆ.

ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದರ್ಶನಕ್ಕೆ ಯಾವುದೇ ಅಡ್ಡಿ ಇಲ್ಲ. ಈ ಬಾರಿ ದೇವಿಯ ದರ್ಶನಕ್ಕೆ ಮುಕ್ತ ಪ್ರವೇಶ ನೀಡಲಾಗಿದ್ದು ಈ ಹಿನ್ನೆಲೆಯಲ್ಲಿ ಹೊಸ ವರ್ಷದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಯ ಸನ್ನಿಧಿಗೆ ಭಕ್ತಾದಿಗಳು ಆಗಮಿಸಿ ದರ್ಶನ ಪಡೆಯುತ್ತಿದ್ದಾರೆ.

ನಾಡದೇವಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಆಲಂಕಾರ ಮಾಡಲಾಗಿದ್ದು, ಈ ಭಾರಿ 300 ರೂ ಶುಲ್ಕದ ವಿಶೇಷ ದರ್ಶನ ವ್ಯವಸ್ಥೆ ಮಾಡಲಾಗಿದೆ ಎರಡು‌ ದಿನಗಳ ಕಾಲ ವಿಶೇಷ ದರ್ಶನದ ವ್ಯವಸ್ಥೆ ಇರಲಿದೆ. ವಿಶೇಷ ದರ್ಶನದ ಜೊತೆ ಭಕ್ತಾದಿಗಳಿಗೆ ಲಡ್ಡು ಪ್ರಸಾದ ವ್ಯವಸ್ಥೆ ಮಾಡಲಾಗಿದೆ.

Key words: Today  new year-devotees-Chamundeshwari temple-mysore