ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಪ್ರಕರಣ: ಮುಖ್ಯ ಶಿಕ್ಷಕ ಸಸ್ಪೆಂಡ್.

ಶಿವಮೊಗ್ಗ, ಡಿಸೆಂಬರ್,28,2023(www.justkannada.in):  ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಗುಡ್ಡದ ನೇರಳೆಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ.

ಗುಡ್ಡದ ನೆರಲೆಗೇರಿ ಗ್ರಾಮದ ಪ್ರಭಾರಿ ಮುಖ್ಯ ಶಿಕ್ಷಕ ಶಂಕರಪ್ಪ ಅಮಾನತಾದವರು. ಡಿಡಿಪಿಐ ಪರಮೇಶ್ವರಪ್ಪ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಗುಡ್ಡದ ನೇರಳೆಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದಲೇ ಶೌಚಾಲಯದ ಸ್ವಚ್ಚತೆಕಾರ್ಯವನ್ನ ಮಾಡಿಸಲಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಇದೀಗ ಪ್ರಭಾರಿ ಮುಖ್ಯ ಶಿಕ್ಷಕ ಶಂಕರಪ್ಪರನ್ನ ಅಮಾನತು ಮಾಡಲಾಗಿದೆ.

ಬೆಂಗಳೂರಿನ ಪೀಣ್ಯ ಬಳಿಯಿರುವ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನ್​ ಮಾಡಿಸಿದ ಅಮಾನವೀಯ ಘಟನೆ ನಡೆದಿತ್ತು.ಈ ಪ್ರಕರಣ ಮಾಸುವ ಮುನ್ನವೇ ಇದೀಗ ಇದೇ ರೀತಿಯ ಮತ್ತೊಂದು ಘಟನೆ ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಮರುಕಳಿಸಿತ್ತು.

Key words: Toilet -cleaning -case – children – school- Headmaster -suspended