ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್: ಶಿಕ್ಷಕರ ವಿರುದ್ದ ಪೋಷಕರಿಂದ ಪ್ರತಿಭಟನೆ.

ಬೆಂಗಳೂರು,ಡಿಸೆಂಬರ್,22,2023(www.justkannada.in): ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಚಗೊಳಿಸಿರುವ ಘಟನೆ   ಬೆಂಗಳೂರಿನಲ್ಲಿ ನಡೆದಿದ್ದು  ಇದೀಗ ಶಿಕ್ಷಕರ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಮಕ್ಕಳ ಪೋಷಕರು ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರಿನ ಪೀಣ್ಯ ಬಳಿಯ ಆಂದ್ರಹಳ್ಳಿಯಲ್ಲಿರುವ  ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ಶಾಲಾ ಮಕ್ಕಳಿಂದ ಶಿಕ್ಷಕರು ಶೌಚಾಲಯ ಕ್ಲೀನ್ ಮಾಡಿಸಿರುವ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವೀಡಿಯೋ ವೈರಲ್ ಆಗುತ್ತಿದ್ದಂತೆ ಆಂದ್ರಹಳ್ಳಿ ಸರ್ಕಾರಿ ಶಾಲೆಯ ಬಳಿ ಸ್ಥಳೀಯ ನಿವಾಸಿಗಳು, ಮಕ್ಕಳ ಪೋಷಕರು ಆಗಮಿಸಿ ಶಿಕ್ಷಕರ ವಿರುದ್ದ ಪ್ರತಿಭಟನೆ ನಡೆಸಿದ್ದಾರೆ.  ಜಮಾಯಿಸಿದ್ದು, ಶಾಲಾ ಶಿಕ್ಷಕರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ ಶಾಲೆಯ ಶಿಕ್ಷಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಮುಂದೆ ಇಂತಹ ಘಟನೆ ಆಗದಂತೆ ಎಚ್ಚರಿಕೆ ವಹಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಇತ್ತೀಚೆಗೆ ಕೋಲಾರದಲ್ಲಿ ವಸತಿ ಶಾಲೆಯ ವಿದ್ಯಾರ್ಥಿನಿಯರಿಂದ ಶೌಚಗುಂಡಿಯನ್ನು ಕ್ಲೀನ್ ಮಾಡಿಸಿದ ಘಟನೆ ನಡೆದಿತ್ತು.

Key words: Toilet -cleaning – children – school-Protest – parents