Tuesday, August 4, 2026

BDA Apartments

Home Front Page ಟೋಕಿಯೊ ಒಲಂಪಿಕ್ಸ್ : ಸೆಮಿಫೈನಲ್ ನಲ್ಲಿ ಭಾರತದ ಪುರುಷರ ಹಾಕಿ ತಂಡಕ್ಕೆ ಸೋಲು.

ಟೋಕಿಯೊ ಒಲಂಪಿಕ್ಸ್ : ಸೆಮಿಫೈನಲ್ ನಲ್ಲಿ ಭಾರತದ ಪುರುಷರ ಹಾಕಿ ತಂಡಕ್ಕೆ ಸೋಲು.

ಟೋಕಿಯೊ,ಆಗಸ್ಟ್,3,2021(www.justkannada.in):  ಟೋಕಿಯೊ ಒಲಿಂಪಿಕ್ಸ್ ನಲ್ಲಿ ಸೆಮಿ ಫೈನಲ್ ಪಂದ್ಯದಲ್ಲಿ ಭಾರತದ ಪುರುಷರ ಹಾಕಿ ತಂಡ ಸೋಲನುಭವಿಸಿದೆ.

ಇಂದು ನಡದ ಪಂದ್ಯದಲ್ಲಿ ಬೆಲ್ಜಿಯಂ ತಂಡದ ವಿರುದ್ಧ 5-2 ಅಂತರದಲ್ಲಿ ಭಾರತ ಪುರುಷರ ಹಾಕಿ ತಂಡ ಸೋಲನುಭವಿಸಿದೆ. ಇನ್ನು ಕಂಚಿನ ಪದಕಕ್ಕೆ ಸೆಣಸಾಡಲಿದೆ. ಕಂಚಿನ ಪದಕದ ಕನಸು ಜೀವಂತವಾಗಿದೆ.

ಸೆಮಿಫೈನಲ್ ನಲ್ಲಿ ಸೋಲಿನ ಬಳಿಕ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಸೋಲು-ಗೆಲುವು ಜೀವನದ ಭಾಗ. ನಮ್ಮ ಭಾರತದ ಪುರುಷರ ಹಾಕಿ ತಂಡ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಮುಂದಿನ ಪಂದ್ಯಕ್ಕೆ ಮತ್ತು ಭವಿಷ್ಯದ ಅಭಿಯಾನಕ್ಕೆ ತಂಡಕ್ಕೆ ಶುಭಾಶಯಗಳು, ನಮ್ಮ ಆಟಗಾರರ ಬಗ್ಗೆ ಹೆಮ್ಮೆಯಿದೆ  ಎಂದು ಹೇಳಿದ್ದಾರೆ.

ಅಲ್ಲದೆ ತಂಡದ ನಾಯಕ ಮನ್ ಪ್ರೀತ್ ಸಿಂಗ್ ಅವರಿಗೆ ಕರೆ ಮಾಡಿ ಮಾತನಾಡಿರುವ ಪ್ರಧಾನಿ ಮೋದಿ, ಪಂದ್ಯದುದ್ದಕ್ಕೂ ಉತ್ತಮ ಪ್ರದರ್ಶನ ತೋರಿಸಿದ್ದೀರಿ, ಮುಂದಿನ ಪಂದ್ಯದಲ್ಲಿ ಇನ್ನಷ್ಟು ಉತ್ತಮ ಪ್ರದರ್ಶನ ನೀಡಿ ಚೆನ್ನಾಗಿ ಆಡಿ ಎಂದು ಶುಭ ಹಾರೈಸಿದ್ದಾರೆ.

Key words: Tokyo Olympics-Defeat – Indian -men’s- hockey team -semifinal