Wednesday, September 16, 2026

BDA Apartments

Home Front Page ಇಂದಿನ ಸಭೆಯಲ್ಲಿ ಹೊಸ ಅಭ್ಯರ್ಥಿಗಳ ಬಗ್ಗೆ ಚರ್ಚೆ: ನಾಳೆ ಅಥವಾ ನಾಡಿದ್ದು ಪಟ್ಟಿ ಬಿಡುಗಡೆ- ಸಿಎಂ...

ಇಂದಿನ ಸಭೆಯಲ್ಲಿ ಹೊಸ ಅಭ್ಯರ್ಥಿಗಳ ಬಗ್ಗೆ ಚರ್ಚೆ: ನಾಳೆ ಅಥವಾ ನಾಡಿದ್ದು ಪಟ್ಟಿ ಬಿಡುಗಡೆ- ಸಿಎಂ ಬೊಮ್ಮಾಯಿ ಸ್ಪಷ್ಟನೆ.

ನವದೆಹಲಿ,ಏಪ್ರಿಲ್,10,2023(www.justkannada.in):  ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ಅಭ್ಯರ್ಥಿಗಳ ಆಯ್ಕಗೆ ತೀವ್ರ ಕಸರತ್ತು ನಡೆಸುತ್ತಿರುವ ಬಿಜೆಪಿ ಮೊದಲ ಪಟ್ಟಿ ಬಿಡುಗಡೆಗೆ ವಿಳಂಬ ಧೋರಣೆ ತೋರುತ್ತಿದೆ. ಇಂದು ಮೊದಲ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿಕೆ ನೀಡಿದ್ದ ಸಿಎಂ ಬಸವರಾಜ ಬೊಮ್ಮಾಯಿ ಇದೀಗ ನಾಳೆ ಅಥವಾ ನಾಡಿದ್ದು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸಂಜೆ 4ಕ್ಕೆ  ಬಿಜೆಪಿ ರಾಷ್ಟ್ರಾಧ್ಯಕ್ಷ  ಜೆಪಿ ನಡ್ಡಾ ಜೊತೆ ಬಿಜೆಪಿ ನಾಯಕರ ಸಭೆ ನಡೆಯಲಿದೆ.  ಇಂದು ನಡೆಯುವ ಸಭೆಯಲ್ಲಿ ಹೊಸ ಅಭ್ಯರ್ಥಿಗಳ ಬಗ್ಗೆ ಚರ್ಚೆಯಾಗಲಿದೆ. ಹೊಸ ಅಭ್ಯರ್ಥಿಗಳ ಬಗ್ಗೆ ಚರ್ಚೆಯಾಗುತ್ತಿರುವುದಕ್ಕೆ ಪಟ್ಟಿ ಬಿಡುಗಡೆ ವಿಳಂಬವಾಗುತ್ತಿದೆ. ನಾಳೆ ಅಥವಾ ನಾಡಿದ್ದು ಅಭ್ಯರ್ಥಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.   ಇಂದಿನ ಸಭೆಯಲ್ಲಿ ಹೊಸ ಅಭ್ಯರ್ಥಿಗಳ ಬಗ್ಗೆ ಚರ್ಚೆ cm bommai cm bommai 5

ಇಂದು ಸಂಜೆ ಜೆಪಿ ನಡ್ಡಾ ನಿವಾಸದಲ್ಲಿ ನಡೆಯಲಿರುವ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿ ರಾಜ್ಯ ನಾಯಕರು ಪಾಲ್ಗೊಳ್ಳುವ ಸಾಧ್ಯತೆ ಇದೆ.

Key words: Tomorrow –bjp-candidates- list -release- CM Bommai