ಲಾಕ್ ಡೌನ್ ವಿಸ್ತರಣೆ ಬಗ್ಗೆ ನಾಳೆ ನಿರ್ಧಾರ- ಸಿಎಂ ಬಿಎಸ್ ವೈ ಸ್ಪಷ್ಟನೆ…

ಬೆಂಗಳೂರು,ಮೇ,,21,2021(www.justkannada.in):   ರಾಜ್ಯದಲ್ಲಿ ಗ್ರಾಮೀಣ ಪ್ರದೇಶಕ್ಕೂ  ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈಗಾಗಲೇ ಜಾರಿಗೊಳಿಸಿರುವ ಲಾಕ್ ಡೌನ್ ಅನ್ನು ಮುಂದುವರೆಸುವ ಬಗ್ಗೆ ಚರ್ಚೆಯಾಗುತ್ತಿದೆ. ಕೊರೋನಾ ಸೋಂಕು ನಿಯಂತ್ರಣಕ್ಕೆ ಇನ್ನಷ್ಟು ದಿನಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡುವಂತೆ ಬಹುತೇಕ ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.jk

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯದಲ್ಲಿ ಕೊರೊನಾ ಸ್ಥಿತಿಗತಿಗಳ ಬಗ್ಗೆ ಇಂದು ಸಂಜೆ ವೇಳೆಗೆ ಸಂಪೂರ್ಣ ಮಾಹಿತಿ ಸಿಗಲಿದೆ. ಹೀಗಾಗಿ ನಾಳೆ ಸಚಿವರ ಜತೆ  ಲಾಕ್ ಡೌನ್ ಬಗ್ಗೆ ಚರ್ಚಿಸಿ  ನಂತರ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.tomorrow-decision-lockdown-extension-cm-bs-yeddyurappa

ಈ ನಡುವೆ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಸಂಜೆ ಕೋವಿಡ್ ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಿ ಚರ್ಚಿಸಲಿದ್ದಾರೆ. ಈ ವೇಳೆ ಲಾಕ್ ಡೌನ್ ವಿಸ್ತರಣೆ ಕುರಿತು ಚರ್ಚಿಸಲಿದ್ದಾರೆ. ಲಾಕ್ ಡೌನ್ ರೂಪುರೇಷೆ ಬಗ್ಗೆ ಮಾಹಿತಿ ಕಲೆ ಹಾಕಲಿದ್ದಾರೆ. ಹೀಗಾಗಿ ಇಂದು ಮತ್ತು ನಾಳೆ ನಡೆಯುವ ಸಭೆ ಮಹತ್ವದ್ದಾಗಿದೆ.

Key words: Tomorrow- decision – lockdown –extension- CM BS Yeddyurappa