Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ಬಿಜೆಪಿಗೆ ಬೆಂಬಲದ ಬಗ್ಗೆ ನಾಳೆ ನಿರ್ಧಾರ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

ಬಿಜೆಪಿಗೆ ಬೆಂಬಲದ ಬಗ್ಗೆ ನಾಳೆ ನಿರ್ಧಾರ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

ಮೈಸೂರು,ಡಿಸೆಂಬರ್,5,2021(www.justkannada.in):   ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲಿಸುವ ಕುರಿತು ನಾಳೆ ನಿರ್ಧಾರ ಮಾಡುತ್ತೇವೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಬಿಜೆಪಿ-ಜೆಡಿಎಸ್ ಬೆಂಬಲ ಕುರಿತು ನಾಳೆ ನಿರ್ಧಾರವಾಗಲಿದೆ. ಬಿಎಸ್ ಯಡಿಯೂರಪ್ಪ ನನ್ನ ನಡುವೆ ವೈಯಕ್ತಿಕ ಮೈತ್ರಿ ಆಗಿದೆ.  ಬಿಎಸ್ ವೈ ಮಾತ್ರ ನನ್ನ ಬೆಂಬಲ ಕೇಳಿದ್ದಾರೆ ಎಂದರು.

ಕಾಂಗ್ರೆಸ್ ನಮಗೆ ಬೆಂಬಲ ಬೇಡ ಎಂದಿದೆ. ಹೀಗಾಗಿ ಬೇಡ ಎಂದವರಿಗೆ ನಾವು ಬೆಂಬಲ ನೀಡಲು ಸಾಧ್ಯವಿಲ್ಲ ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.

Key words: Tomorrow- decision – support –BJP-Former CM- HD Kumaraswamy.