Sunday, August 23, 2026

BDA Apartments

Home Front Page ಕೈ ಹೋರಾಟಕ್ಕೆ ಪ್ರತಿತಂತ್ರ: ನಾಳೆ ಸಿಎಂ ನೇತೃತ್ವದಲ್ಲಿ ಬಿಜೆಪಿ ನಾಯಕರ ಸಭೆ

ಕೈ ಹೋರಾಟಕ್ಕೆ ಪ್ರತಿತಂತ್ರ: ನಾಳೆ ಸಿಎಂ ನೇತೃತ್ವದಲ್ಲಿ ಬಿಜೆಪಿ ನಾಯಕರ ಸಭೆ

ಬೆಂಗಳೂರು, ಫೆಬ್ರವರಿ 20, 2022 (www.justkannaa.in): ಕಾಂಗ್ರೆಸ್ ಹೋರಾಟದ ಹಿನ್ನೆಲೆಯಲ್ಲಿ ಪ್ರತಿತಂತ್ರ ರೂಪಿಸಲು ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ.

ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಸೂಚನೆ ಮೇರೆಗೆ ನಾಳೆ ಬಿಜೆಪಿ ನಾಯಕರ ಸಭೆ ನಡೆಯಲಿದೆ.

ನಾಳೆ ಬೆಳಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಬಿಜೆಪಿ ನಾಯಕರು ಮಹತ್ವದ ಸಭೆ ನಡೆಸಲಿದ್ದಾರೆ.

ಕಾಂಗ್ರೆಸ್ ಹೋರಾಟಕ್ಕೆ ಟಾಂಗ ಕೊಡುವ ನಿಟ್ಟಿನಲ್ಲಿ ಪ್ರತಿತಂತ್ರ ರೂಪಿಸಲು ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ.